ಕೀರ್ತನೆಗಳು 57:2 - ಪರಿಶುದ್ದ ಬೈಬಲ್2 ಸಹಾಯಕ್ಕಾಗಿ ಮಹೋನ್ನತನಾದ ದೇವರಿಗೆ ಮೊರೆಯಿಡುವೆನು. ಆತನು ಕೊರತೆಗಳನ್ನೆಲ್ಲಾ ನೀಗಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪರಾತ್ಪರನಾದ ದೇವರಿಗೆ ಮೊರೆಯಿಡುವೆನು, ನನ್ನ ಕಾರ್ಯವನ್ನು ಸಫಲಮಾಡುವ ದೇವರನ್ನು ಕೂಗಿ ಕರೆಯುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನನ್ನ ಕಾರ್ಯವನು ಕೈಗೂಡಿಸುವ ದೇವನಿಗೆ I ನಾ ಮೊರೆಯಿಡುವೆ ಪರಾತ್ಪರನಾದಾ ಕರ್ತನಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪರಾತ್ಪರನಾದ ದೇವರಿಗೆ ಮೊರೆಯಿಡುವೆನು, ನನ್ನ ಕಾರ್ಯವನ್ನು ಸಿದ್ಧಿಗೆ ತರುವ ದೇವರನ್ನು ಕೂಗಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಮಹೋನ್ನತನಾದ ದೇವರಿಗೆ, ಮೊರೆಯಿಡುತ್ತೇನೆ. ನನಗಾಗಿ ಕಾರ್ಯಗಳಿಗೆ ನ್ಯಾಯ ನೀಡುವ ದೇವರಿಗೆ ಮೊರೆಯಿಡುತ್ತೇನೆ. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.