Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 57:7 - ಪರಿಶುದ್ದ ಬೈಬಲ್‌

7 ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನನ್ನ ಹೃದಯವು ದೃಢವಾಗಿದೆ. ನಾನು ವಾದ್ಯ ಬಾರಿಸುತ್ತಾ ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸ್ಥಿರವಿದೆ ದೇವಾ, ಸುಸ್ಥಿರವಿದೆ ನನ್ನ ಮನ I ಹಾಡುತ ಪಾಡುತ ನಾ ರಚಿಸುವೆ ಗಾಯನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ಬಾರಿಸುತ್ತಾ ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರೇ, ನನ್ನ ಹೃದಯವು ಸ್ಥಿರವಾಗಿದೆ. ಹೌದು, ನನ್ನ ಹೃದಯವು ಸ್ಥಿರವಾಗಿದೆ. ನಾನು ಸಂಗೀತದೊಡನೆ ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 57:7
11 ತಿಳಿವುಗಳ ಹೋಲಿಕೆ  

ಒಳ್ಳೆಯವನು ಕೆಟ್ಟಸುದ್ದಿಗೆ ಭಯಪಡಬೇಕಿಲ್ಲ. ಅವನು ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ ಅವನ ಮನಸ್ಸು ಸ್ಥಿರವಾಗಿರುವುದು.


ನಾನು ಯೆಹೋವನ ಸನ್ನಿಧಿಯಲ್ಲಿ ಮೊರೆಯಿಟ್ಟಾಗ ಆತನು ನನಗೆ ಸಹಾಯಮಾಡಿದನು. ನನ್ನನ್ನು ಎಲ್ಲಾ ಭೀತಿಗಳಿಂದ ಬಿಡಿಸಿದನು.


ಪ್ರತಿಯೊಂದು ವಿಷಯದಲ್ಲಿಯೂ ತಂದೆಯಾದ ದೇವರಿಗೆ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ಯಾವಾಗಲೂ ಸ್ತೋತ್ರಮಾಡಿರಿ.


ಆ ಜನರು, “ಪೂರ್ವದಲ್ಲಿರುವ ಜನರೇ, ದೇವರಿಗೆ ಸ್ತೋತ್ರಮಾಡಿರಿ! ದೂರ ದೇಶಗಳಲ್ಲಿರುವ ಜನರೇ, ಇಸ್ರೇಲರ ದೇವರಾದ ಯೆಹೋವನ ಹೆಸರನ್ನು ಕೊಂಡಾಡಿರಿ” ಎಂದು ಹೇಳುವರು.


ಅಲ್ಲದೆ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷವಾಗಿದ್ದೇವೆ. ಏಕೆಂದರೆ, ಈ ಕಷ್ಟಸಂಕಟಗಳು ನಮ್ಮಲ್ಲಿ ಹೆಚ್ಚು ತಾಳ್ಮೆಯನ್ನು ಉಂಟುಮಾಡುತ್ತವೆ.


ಅವರು ತಮ್ಮ ಕುಯುಕ್ತಿಗೆ ತಕ್ಕ ದಂಡನೆಯನ್ನು ಹೊಂದುವರು. ಅವರು ಇತರರ ವಿಷಯದಲ್ಲಿ ಕ್ರೂರವಾಗಿ ನಡೆದುಕೊಂಡರು. ಅವರು ಮಾಡಿದ ಹಿಂಸೆಯು ಅವರಿಗೇ ಸಂಭವಿಸುವುದು.


ನಾನು ನಿರಪರಾಧಿಯಾಗಿದ್ದರೂ ಅವರು ನನಗೆ ಬಲೆಯೊಡ್ಡಿದ್ದಾರೆ. ನಿಷ್ಕಾರಣವಾಗಿ ಅವರು ನನಗೆ ಬಲೆಯೊಡ್ಡಿದ್ದಾರೆ.


ದುಷ್ಟರು ನನಗೆ ಬಲೆಯೊಡ್ಡಿದ್ದಾರೆ. ನಾನಾದರೋ ನಿನ್ನ ವಿಧಿನಿಯಮಗಳಿಗೆ ಅವಿಧೇಯನಾಗಲಿಲ್ಲ.


ಯೆಹೋವನೇ, ನನ್ನ ದೇವರು ನೀನೇ. ನನ್ನ ಪ್ರಾರ್ಥನೆಗೆ ಕಿವಿಗೊಡು.


ಕೆಟ್ಟವರು ನನಗೆ ಬಲೆಗಳನ್ನು ಒಡ್ಡಿದ್ದಾರೆ. ಅವರ ಬೋನುಗಳಿಂದ ನನ್ನನ್ನು ತಪ್ಪಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು