Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:1 - ಪರಿಶುದ್ದ ಬೈಬಲ್‌

1 ನನ್ನ ದೇವರೇ, ವೈರಿಗಳಿಂದ ನನ್ನನ್ನು ಬಿಡಿಸು. ನನಗೆ ವಿರೋಧವಾಗಿ ಎದ್ದಿರುವ ಜನರಿಂದ ನನ್ನನ್ನು ಸಂರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು; ನನಗೆ ವಿರುದ್ಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಶತ್ರುಗಳಿಂದ ದೇವಾ, ತಪ್ಪಿಸು I ಎದುರಾಳಿಗಳಿಂದೆನ್ನ ರಕ್ಷಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸಿರಿ. ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸಿರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:1
16 ತಿಳಿವುಗಳ ಹೋಲಿಕೆ  

ಯೆಹೋವನೇ, ಶತ್ರುಗಳಿಂದ ನೀನು ನನ್ನನ್ನು ಕಾಪಾಡಿದೆ. ನನ್ನ ವಿರೋಧಿಗಳನ್ನು ಸೋಲಿಸಲು ನೀನು ನನಗೆ ಸಹಾಯಮಾಡಿದೆ; ಕ್ರೂರಿಗಳಿಂದ ನನ್ನನ್ನು ರಕ್ಷಿಸಿದೆ.


ದೇವರೇ, ನನ್ನನ್ನು ಕರುಣಿಸು, ನನ್ನನ್ನು ಕನಿಕರಿಸು. ನನ್ನ ಆತ್ಮವು ನಿನ್ನನ್ನೇ ಆಶ್ರಯಿಸಿಕೊಂಡಿದೆ. ಆಪತ್ತು ಕೊನೆಗೊಳ್ಳುವ ತನಕ ಸಂರಕ್ಷಣೆಗಾಗಿ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ಅಂಥವರು ಉನ್ನತವಾದ ಸ್ಥಳದಲ್ಲಿ ಸುರಕ್ಷಿತವಾಗಿ ವಾಸಿಸುವರು. ಎತ್ತರವಾದ ಬಂಡೆಕಲ್ಲಿನ ಕೋಟೆಯೊಳಗೆ ಅವರು ಕಾಪಾಡಲ್ಪಡುವರು. ಅವರ ಬಳಿ ಆಹಾರ ಮತ್ತು ನೀರು ಯಾವಾಗಲೂ ಇರುವದು.


ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ; ಶತ್ರುಗಳಿಂದ ನನ್ನನ್ನು ರಕ್ಷಿಸು.


ನನ್ನ ದೇವರೇ, ದುಷ್ಟರಿಂದಲೂ ಕ್ರೂರವಾದ ಕೆಟ್ಟವರಿಂದಲೂ ನನ್ನನ್ನು ರಕ್ಷಿಸು.


ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನನ್ನನ್ನು ಕೊಲ್ಲಬೇಕೆಂದಿರುವ ಶತ್ರುಗಳನ್ನು ಸೋಲಿಸು. ನಾನು ನಿನ್ನ ಸೇವಕನಾಗಿರುವೆ.


ಯೆಹೋವನು ಹೇಳುವುದೇನೆಂದರೆ: “ನನ್ನಲ್ಲಿ ಭರವಸವಿಡುವವನನ್ನು ರಕ್ಷಿಸುವೆನು; ನನ್ನ ಹೆಸರನ್ನು ಆರಾಧಿಸುವ ಭಕ್ತರನ್ನು ಸಂರಕ್ಷಿಸುವೆನು.


ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಮೊರೆಯನ್ನು ಕೇಳಲಿ. ಯಾಕೋಬನ ದೇವರು ನಿನ್ನ ಹೆಸರನ್ನು ಪ್ರಖ್ಯಾತಿಪಡಿಸಲಿ.


ಆದರೆ ಯೆಹೋವನು ಹೇಳುವುದೇನೆಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”


ಅಧಿಪತಿಗಳೇ, ನಿಮ್ಮ ತೀರ್ಪುಗಳು ನ್ಯಾಯವಾಗಿವೆಯೋ? ನ್ಯಾಯಾಧಿಪತಿಗಳೇ, ನಿಮ್ಮ ತೀರ್ಪುಗಳು ಯಥಾರ್ಥವಾಗಿವೆಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು