Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:15 - ಪರಿಶುದ್ದ ಬೈಬಲ್‌

15 ಅವರು ಊಟಕ್ಕಾಗಿ ಹುಡುಕಾಡಿದರೂ ಸಿಕ್ಕುವುದಿಲ್ಲ; ಮಲಗಲು ಸ್ಥಳವೂ ಸಿಕ್ಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ; ಹೊಟ್ಟೆಗಿಲ್ಲದಿದ್ದರೆ ಗುಣುಗುಟ್ಟುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅನ್ನಕ್ಕಾಗಿ ಅಲೆದಾಡುವರು ಅತ್ತಿತ್ತಾ I ಹೊಟ್ಟೆತುಂಬದಿರೆ ಅಡ್ಡಾಡುವರು ಬೊಗಳುತ್ತಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ; ಹೊಟ್ಟೆಗಿಲ್ಲದಿದ್ದರೆ ಬೊಗಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರು ಆಹಾರಕ್ಕಾಗಿ ಅಲೆದಾಡುವರು. ತೃಪ್ತಿಯಾಗದಿದ್ದರೆ ಗೊಣಗುಟ್ಟುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:15
13 ತಿಳಿವುಗಳ ಹೋಲಿಕೆ  

ಅವನು ಅತ್ತಿತ್ತ ಅಲೆದಾಡುವನು; ಅವನ ದೇಹವು ರಣಹದ್ದುಗಳಿಗೆ ಆಹಾರವಾಗುವುದು. ಮರಣವು ತನಗೆ ಬಹು ಸಮೀಪವಾಗಿರುವುದು ಅವನಿಗೆ ಗೊತ್ತೇ ಇದೆ.


ಅವನ ಮಕ್ಕಳು ತಮ್ಮ ಮನೆಯನ್ನು ಕಳೆದುಕೊಂಡು ತಿರುಕರಂತೆ ಅಲೆಯುತ್ತಾ ಭಿಕ್ಷುಕರಾಗಲಿ.


ಕೆಲವು ಸುಳ್ಳುಪ್ರವಾದಿಗಳೆದ್ದು ಯೆಹೋವನ ಜನರಿಗೆ ಸುಳ್ಳನ್ನು ತಿಳಿಸುತ್ತಾರೆ. ಅಂಥವರ ಬಗ್ಗೆ ಯೆಹೋವನು ಹೇಳುವುದೇನೆಂದರೆ, “ಈ ಪ್ರವಾದಿಗಳ ಮಾತುಗಳು ಅವರ ಹೊಟ್ಟೆಗಳನ್ನವಲಂಬಿಸಿವೆ. ಜನರು ಅವರಿಗೆ ಆಹಾರ ಕೊಟ್ಟರೆ ಶಾಂತಿಯನ್ನು ವಾಗ್ದಾನ ಮಾಡುತ್ತಾರೆ. ಜನರು ಅವರಿಗೆ ಆಹಾರ ಕೊಡದಿದ್ದರೆ ಯುದ್ಧವನ್ನು ವಾಗ್ದಾನ ಮಾಡುತ್ತಾರೆ.


ಆಹಾರಕ್ಕಾಗಿ ನಾವು ನಮ್ಮ ಪ್ರಾಣಗಳನ್ನೇ ಆಪತ್ತಿಗೆ ಗುರಿ ಮಾಡಿಕೊಳ್ಳುತ್ತೇವೆ. ಊರ ಹೊರಗೆ ಖಡ್ಗಗಳನ್ನು ಹಿಡಿದುಕೊಂಡಿರುವ ಜನರಿದ್ದಾರೆ.


ಅವರು ಹಸಿದ ನಾಯಿಗಳಂತಿದ್ದಾರೆ. ಅವರು ಎಂದಿಗೂ ತೃಪ್ತಿ ಹೊಂದುವವರಲ್ಲ. ಕುರುಬರಿಗೆ ತಾವು ಮಾಡುವುದೇ ತಿಳಿಯದು. ಅವರು ತಮ್ಮ ಕುರಿಗಳ ಹಾಗೆ ದಾರಿತಪ್ಪಿದ್ದಾರೆ. ಅವರೆಲ್ಲಾ ಅತ್ಯಾಶೆಯುಳ್ಳವರು; ತಮ್ಮನ್ನು ತೃಪ್ತಿಪಡಿಸುವದೇ ಅವರ ಕೆಲಸ.


ನೀವು ಆ ತಪ್ಪಾದ ಆಜ್ಞೆಗಳನ್ನು ಅನುಸರಿಸಿದರೆ ನಿಮ್ಮ ದೇಶದಲ್ಲಿ ಸಂಕಟವೂ ಹಸಿವೆಯೂ ಉಂಟಾಗುತ್ತವೆ. ಜನರು ಹಸಿವಿನಿಂದ ಬಳಲುವರು. ಆಗ ಅವರಲ್ಲಿ ಸಿಟ್ಟು ಉಂಟಾಗಿ ತಮ್ಮ ಅರಸನನ್ನೂ ಅವನ ದೇವರುಗಳನ್ನೂ ಬೈಯುವರು ಮತ್ತು ಸಹಾಯಕ್ಕಾಗಿ ದೇವರಿಗೆ ಮೊರೆಯಿಡುವರು.


ಆದ್ದರಿಂದ ಆತನು ನಿಮ್ಮ ವೈರಿಗಳನ್ನು ಕಳುಹಿಸಿ ಅವರ ಸೇವೆ ನೀವು ಮಾಡುವಂತೆ ಮಾಡುವನು. ನೀವು ಹಸಿವು ಬಾಯಾರಿಕೆಗಳಿಂದ ಬಳಲುವಿರಿ; ಬಟ್ಟೆಯಿಲ್ಲದೆ ಬಡವರಾಗಿ ಜೀವಿಸುವಿರಿ. ನಿಮ್ಮ ಯೆಹೋವನು ನಿಮ್ಮ ಮೇಲೆ ಭಾರವನ್ನು ಹೊರಿಸುವನು. ಆ ಭಾರವನ್ನು ನಿಮ್ಮಿಂದ ತೆಗೆಯಲಾಗುವುದಿಲ್ಲ; ನೀವು ನಾಶವಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು