Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:16 - ಪರಿಶುದ್ದ ಬೈಬಲ್‌

16 ನಾನಾದರೋ ಮುಂಜಾನೆ ನಿನಗೆ ಸ್ತುತಿಗೀತೆಗಳನ್ನು ಹಾಡುವೆ; ನಿನ್ನ ಪ್ರೀತಿಯ ಕುರಿತು ಕೊಂಡಾಡುವೆನು; ಯಾಕೆಂದರೆ ಇಕ್ಕಟ್ಟಿನಲ್ಲಿ ನೀನೇ ನನಗೆ ಆಶ್ರಯದುರ್ಗವಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾನಾದರೊ ಹೊಗಳಿ ಹಾಡುವೆ ದೇವಾ, ನಿನ್ನ ಸಾಮರ್ಥ್ಯವನು I ಉದಯಕಾಲದಲೆ ನಾ ಸಂಕೀರ್ತಿಸುವೆ ನಿನ್ನ ಪ್ರೀತಿ ಪ್ರೇಮವನು I ಸಂಕಟದಲ್ಲೆನಗಾದ ಆಶ್ರಯಗಿರಿ, ದುರ್ಗ, ನೀನಲ್ಲವೇನು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ನಾನು ನಿಮ್ಮ ಬಲವನ್ನು ಕುರಿತು ಹಾಡುವೆನು. ಹೌದು, ಮುಂಜಾನೆ ನಿಮ್ಮ ಪ್ರೀತಿಯ ಕುರಿತು ಹಾಡುವೆನು. ಏಕೆಂದರೆ ನೀವು ನನಗೆ ಭದ್ರಕೋಟೆಯೂ, ನನ್ನ ಇಕ್ಕಟ್ಟಿನಲ್ಲಿ ಆಶ್ರಯವಾಗಿಯೂ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:16
31 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಪರಾಕ್ರಮಕ್ಕಾಗಿ ನಿನ್ನನ್ನು ಕೊಂಡಾಡುವೆನು. ನಿನ್ನ ಮಹತ್ವದ ಬಗ್ಗೆ ವಾದ್ಯ ನುಡಿಸುತ್ತಾ ಹಾಡುವೆವು.


ನಮ್ಮಲ್ಲಿ ಕಾರ್ಯಮಾಡುತ್ತಿರುವ ತನ್ನ ಶಕ್ತಿಯಿಂದ ನಾವು ಕೇಳುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಎಷ್ಟೋ ಹೆಚ್ಚೆಚ್ಚಾಗಿ ದೇವರು ಮಾಡಬಲ್ಲನು.


ದೇವರು ತಮಗೆ ತೋರುವ ಕರುಣೆಗಾಗಿ ಯೆಹೂದ್ಯರಲ್ಲದವರು ಆತನನ್ನು ಮಹಿಮೆಪಡಿಸಲೆಂದು ಕ್ರಿಸ್ತನು ಯೆಹೂದ್ಯರ ಸೇವಕನಾದನು. ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆಯಲ್ಪಟ್ಟಿದೆ: “ಆದ್ದರಿಂದ ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ನಾನು ನಿನ್ನನ್ನು ಸ್ತುತಿಸುವೆನು: ನಾನು ನಿನ್ನ ಹೆಸರನ್ನು ಸಂಕೀರ್ತಿಸುವೆನು.”


ಆತನ ಕೋಪವು ಕ್ಷಣಮಾತ್ರವಿರುವುದು. ಆತನ ಪ್ರೀತಿಯಾದರೋ ಶಾಶ್ವತವಾದದ್ದು. ನಾನು ಸಂಜೆಯಲ್ಲಿ ದುಃಖದಿಂದ ಮಲಗಿಕೊಂಡರೂ ಮುಂಜಾನೆ ಹರ್ಷದಿಂದ ಎಚ್ಚರಗೊಳ್ಳುವೆನು.


ಮುಂಜಾನೆಯಲ್ಲಿ ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನಾನು ಮಾಡಬೇಕಾದವುಗಳನ್ನು ನನಗೆ ತೋರಿಸು. ನಾನು ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿದ್ದೇನೆ!


ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು. ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು.


ಮರಣದ ಈ ಮಹಾ ಅಪಾಯಗಳಿಂದ ದೇವರು ನಮ್ಮನ್ನು ರಕ್ಷಿಸಿದನು. ಮತ್ತು ಇನ್ನು ಮುಂದೆಯೂ ರಕ್ಷಿಸುವನು. ನಾವು ಆತನಲ್ಲಿ ಭರವಸೆ ಇಟ್ಟಿದ್ದೇವೆ. ಆತನು ನಮ್ಮನ್ನು ಇನ್ನು ಮುಂದೆಯೂ ರಕ್ಷಿಸುವನು.


ಆತನ ಪ್ರೀತಿಯನ್ನೂ ನೀತಿಯನ್ನೂ ಹಾಡಿಹರಸುವೆನು. ಯೆಹೋವನೇ, ನಿನಗೆ ಗಾಯನ ಮಾಡುವೆನು.


ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.


ಅವರು ನಿನ್ನ ರಾಜ್ಯದ ಮಹತ್ವವನ್ನು ಕುರಿತು ಹೇಳುವರು. ನಿನ್ನ ಪರಾಕ್ರಮವನ್ನು ವರ್ಣಿಸುವರು.


ಯೆಹೋವನೇ, ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನಿನ್ನ ನಂಬಿಗಸ್ತಿಕೆಯು ಮೇಘಗಳಿಗಿಂತಲೂ ಎತ್ತರವಾಗಿದೆ.


ದೇವರೇ, ನಿನ್ನ ಕರುಣೆಯು ನನ್ನನ್ನು ಉಲ್ಲಾಸಗೊಳಿಸುವುದು. ನನ್ನ ಸಂಕಟವನ್ನು ನೀನು ನೋಡಿರುವೆ; ನನಗಿರುವ ಆಪತ್ತುಗಳು ನಿನಗೆ ತಿಳಿದಿವೆ.


ನೀತಿಸ್ವರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು! ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು! ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸಿ ಸುರಕ್ಷಿತ ಸ್ಥಳದಲ್ಲಿ ಸೇರಿಸು.


“ಸರ್ವಶಕ್ತನಾದ ದೇವರು ಮಹೋನ್ನತನೇ ಸರಿ! ನಾವು ಆತನನ್ನು ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವಿಲ್ಲ. ದೇವರು ಮಹಾ ಬಲಿಷ್ಠನಾಗಿದ್ದರೂ ನಮಗೆ ಒಳ್ಳೆಯವನೂ ನ್ಯಾಯವಂತನೂ ಆಗಿದ್ದಾನೆ; ಆತನು ನಮ್ಮನ್ನು ಹಿಂಸಿಸಲು ಇಷ್ಟಪಡುವುದಿಲ್ಲ.


“ಇದು ಯಾಕೋಬ್ಯರಿಗೆ ಬಹು ಮುಖ್ಯವಾದ ಸಮಯ. ಇದು ಬಹಳ ಕಷ್ಟದ ಸಮಯ. ಎಂದೂ ಇಂಥ ಕಷ್ಟದ ಸಮಯ ಬರುವದಿಲ್ಲ. ಆದರೆ ಯಾಕೋಬ್ ಇದರಿಂದ ಪಾರಾಗುವುದು.”


ಯೆಹೋವನೇ, ನಿನ್ನ ಪ್ರೀತಿಯನ್ನೂ ನಂಬಿಗಸ್ತಿಕೆಯನ್ನೂ ಸದಾಕಾಲ ಹಾಡಿ ಕೊಂಡಾಡುವೆನು!


ಯೆಹೋವನೇ, ನಿನ್ನ ಸಹಾಯಕ್ಕಾಗಿ ಮೊರೆಯಿಡುತ್ತಿದ್ದೇನೆ. ಪ್ರತಿ ಮುಂಜಾನೆಯೂ ನಿನಗೆ ಪ್ರಾರ್ಥಿಸುತ್ತಿದ್ದೇನೆ.


ನನ್ನ ಯೆಹೋವನೇ, ಇಕ್ಕಟ್ಟಿನಲ್ಲಿ ನಿನ್ನನ್ನು ಕರೆದೆನು; ರಾತ್ರಿಯೆಲ್ಲಾ ನಿನಗಾಗಿ ಕೈಚಾಚಿಕೊಂಡಿದ್ದೆನು. ಆದರೆ ನನ್ನ ಮನಸ್ಸು ಸಮಾಧಾನಗೊಳ್ಳಲಿಲ್ಲ.


ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.


ಯೆಹೋವನು ನನ್ನನ್ನು ಸಿಂಹದಿಂದಲೂ ಕರಡಿಯಿಂದಲೂ ರಕ್ಷಿಸಿದನು. ಯೆಹೋವನು ಈ ಗೊಲ್ಯಾತನಿಂದಲೂ ನನ್ನನ್ನು ರಕ್ಷಿಸುತ್ತಾನೆ” ಎಂದು ಹೇಳಿದನು. ಸೌಲನು ದಾವೀದನಿಗೆ, “ಹೋಗು, ಯೆಹೋವನು ನಿನ್ನೊಂದಿಗಿರಲಿ” ಎಂದು ಹೇಳಿದನು.


ಯೆಹೋವನೇ, ಪ್ರತಿಮುಂಜಾನೆ ನಿನಗೆ ಕಾಣಿಕೆಗಳನ್ನು ಅರ್ಪಿಸಿ ಸಹಾಯಕ್ಕಾಗಿ ಎದುರುನೋಡುವೆನು; ಪ್ರತಿಮುಂಜಾನೆ ನೀನು ನನ್ನ ಪ್ರಾರ್ಥನೆಗಳಿಗೆ ಕಿವಿಗೊಡುವೆ.


ಆದರೆ ಆತನು ತನ್ನ ಹೆಸರಿನ ನಿಮಿತ್ತವಾಗಿ ನಮ್ಮ ಪೂರ್ವಿಕರನ್ನು ರಕ್ಷಿಸಿದನು; ತನ್ನ ಮಹಾಶಕ್ತಿಯನ್ನು ತೋರಿಸುವುದಕ್ಕಾಗಿ ಅವರನ್ನು ರಕ್ಷಿಸಿದನು.


ನೀನು ನನ್ನ ಮೇಲೆ ಎಷ್ಟೋ ಪ್ರೀತಿಯನ್ನು ಇಟ್ಟಿರುವೆ. ನೀನು ನನ್ನನ್ನು ಪಾತಾಳದಿಂದ ರಕ್ಷಿಸಿದೆ.


ನಾನು ಸಹಾಯಕ್ಕಾಗಿ ದೇವರ ಬಳಿಗೆ ಓಡಿಹೋಗುತ್ತೇನೆ. ಆತನೇ ನನ್ನ ಆಶ್ರಯಗಿರಿ. ಯೆಹೋವನು ನನ್ನ ಗುರಾಣಿ. ಆತನ ಶಕ್ತಿಯು ನನ್ನನ್ನು ರಕ್ಷಿಸುತ್ತದೆ. ಆತನು ನಾನು ಅಡಗಿಕೊಳ್ಳುವ ಸ್ಥಳ; ಬೆಟ್ಟಗಳ ಮೇಲಿರುವ ನನ್ನ ಸುರಕ್ಷಿತ ಸ್ಥಳ; ಆತನು ನನ್ನನ್ನು ಕ್ರೂರ ಶತ್ರುಗಳಿಂದ ರಕ್ಷಿಸುವನು!


“ನಿನ್ನ ಭುಜಬಲವು ಎಷ್ಟೋ ಶಕ್ತಿಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಭುಜಬಲವು ವೈರಿಯನ್ನು ನುಚ್ಚುನೂರು ಮಾಡಿತು.


ಅವನು ಅತ್ತಿತ್ತ ಅಲೆದಾಡುವನು; ಅವನ ದೇಹವು ರಣಹದ್ದುಗಳಿಗೆ ಆಹಾರವಾಗುವುದು. ಮರಣವು ತನಗೆ ಬಹು ಸಮೀಪವಾಗಿರುವುದು ಅವನಿಗೆ ಗೊತ್ತೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು