ಕೀರ್ತನೆಗಳು 6:2 - ಪರಿಶುದ್ದ ಬೈಬಲ್2 ಯೆಹೋವನೇ, ನನ್ನನ್ನು ಕನಿಕರಿಸು! ನಾನು ರೋಗಿಯಾಗಿದ್ದೇನೆ, ಬಲಹೀನನಾಗಿದ್ದೇನೆ, ನನ್ನನ್ನು ಗುಣಪಡಿಸು! ನನ್ನ ಎಲುಬುಗಳು ನಡುಗುತ್ತಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕನಿಕರಿಸು ಹೇ ಪ್ರಭು, ನಾನು ಬಲಹೀನನು I ಗುಣಪಡಿಸು ಸಡಿಲವಾದ ಎನ್ನೆಲುಬುಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ತತ್ತರಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಬಲಹೀನನಾಗಿದ್ದೇನೆ; ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿರಿ, ನನ್ನ ಎಲುಬುಗಳು ಬಹು ವ್ಯಥೆಗೊಳಗಾಗಿವೆ. ಅಧ್ಯಾಯವನ್ನು ನೋಡಿ |
ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.