ಕೀರ್ತನೆಗಳು 6:6 - ಪರಿಶುದ್ದ ಬೈಬಲ್6 ಯೆಹೋವನೇ, ರಾತ್ರಿಯೆಲ್ಲಾ ನಿನಗೆ ಪ್ರಾರ್ಥಿಸಿದೆನು. ನನ್ನ ಹಾಸಿಗೆಯು ನನ್ನ ಕಣ್ಣೀರಿನಿಂದ ಒದ್ದೆಯಾಗಿದೆ. ನನ್ನ ಹಾಸಿಗೆಯಿಂದ ಕಣ್ಣೀರು ತೊಟ್ಟಿಕ್ಕುತ್ತಿದೆ. ನಾನು ಅತ್ತು ಗೋಳಾಡಿ ಬಲಹೀನನಾಗಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾನು ನರಳಿ ನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ದಣಿದಿರುವೆ ನಾ ದುಃಖದಿಂದ ನರಳಿ ನರಳಿ I ತೊಯ್ದಿದೆ ಹಾಸಿಗೆ ಇರುಳಿರುಳ ಕಂಬನಿಯಲಿ I ತೇಲಿದೆ ಮಂಚ ಈ ಕಣ್ಣೀರ ಪ್ರವಾಹದಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾನು ನರನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನನ್ನ ನರಳಾಟದಿಂದ ದಣಿದು ಹೋಗಿದ್ದೇನೆ. ರಾತ್ರಿಯೆಲ್ಲಾ ನಾನು ಅಳುವುದರಿಂದ ನನ್ನ ಹಾಸಿಗೆಯು ಕಣ್ಣೀರಿನ ಪ್ರವಾಹದಿಂದ ತೇಲಾಡುತ್ತದೆ, ಕಣ್ಣೀರಿನಿಂದ ನನ್ನ ಮಂಚವನ್ನು ತೊಯಿಸಿದ್ದೇನೆ. ಅಧ್ಯಾಯವನ್ನು ನೋಡಿ |