Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 6:7 - ಪರಿಶುದ್ದ ಬೈಬಲ್‌

7 ನನ್ನ ವೈರಿಗಳು ನನಗೆ ಅನೇಕ ತೊಂದರೆಗಳನ್ನು ಮಾಡಿರುವುದರಿಂದ ನನಗೆ ದುಃಖವೂ ಗೋಳಾಟವೂ ಉಂಟಾಗಿವೆ. ನನ್ನ ಕಣ್ಣುಗಳು ಬಲಹೀನಗೊಂಡಿವೆ; ಅತ್ತತ್ತು ಆಯಾಸಗೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು; ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮಂಕಾದವು ಕಣ್ಣುಗಳು ರೋದನದಿಂದ I ಮಬ್ಬಾದವವು ವೈರಿಗಳ ಬಾಧೆಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದುಃಖದಿಂದ ನನ್ನ ಕಣ್ಣು ಡೊಗರಾಯಿತು; ವಿರೋಧಿಗಳ ಬಾಧೆಯ ದೆಸೆಯಿಂದಲೇ ಮೊಬ್ಬಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದುಃಖದಿಂದ ನನ್ನ ಕಣ್ಣುಗಳು ಬಲಹೀನವಾಗಿವೆ, ನನ್ನ ಸಕಲ ವೈರಿಗಳಿಂದ ಅವು ಮೊಬ್ಬಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 6:7
10 ತಿಳಿವುಗಳ ಹೋಲಿಕೆ  

ನನ್ನ ಹೃದಯದ ವೇದನೆಯಿಂದ ಶಕ್ತಿಯು ಕುಂದಿಹೋಗಿದೆ; ನನ್ನ ದೃಷ್ಟಿಯು ಹಿಂಗಿಹೋಗಿದೆ.


ನನ್ನ ಕಣ್ಣುಗಳು ಕುರುಡಾಗಿವೆ, ನಾನು ಬಹು ದುಃಖಿತನಾಗಿದ್ದೇನೆ. ಅತ್ಯಧಿಕವಾದ ನೋವಿನಲ್ಲಿದ್ದೇನೆ; ನನ್ನ ದೇಹವು ನೆರಳಿನಂತೆ ಬಹು ತೆಳ್ಳಗಾಗಿದೆ.


ಇವುಗಳ ದೆಸೆಯಿಂದಾಗಿ ನಮ್ಮ ಹೃದಯಗಳು ಎಡಬಿಡದೆ ನೋಯುತ್ತಿವೆ. ನಮ್ಮ ಕಣ್ಣುಗಳು ಸರಿಯಾಗಿ ಕಾಣದಂತಾಗಿವೆ.


ನನ್ನ ಎಲ್ಲಾ ಸಂಕಟಗಳಿಂದ ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ. ಯೆಹೋವನೇ, ನಾನು ನಿನಗೆ ಎಡಬಿಡದೆ ಪ್ರಾರ್ಥಿಸುವೆನು! ನನ್ನ ಕೈಗಳನ್ನು ಎತ್ತಿ ನಿನಗೆ ಪ್ರಾರ್ಥಿಸುವೆನು!


ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ ದಿನವೆಲ್ಲ್ಲಾ ಪಾಪದಿಂದ ನರಳಬೇಕಾಯಿತು; ವೇದನೆಯಿಂದ ನನ್ನ ಎಲುಬುಗಳೇ ಸವೆದು ಹೋಗುವಂತಾಯಿತು.


“ಯೆಹೋವನೇ, ನಾನು ಪೂರ್ಣಮನಸ್ಸಿನಿಂದ ನಿಜವಾಗಿಯೂ ನಿನ್ನ ಸೇವೆಮಾಡಿದ್ದೇನೆಂಬುದನ್ನು ನೆನಪುಮಾಡಿಕೊ. ನೀನು ಯೋಗ್ಯವೆಂದು ಹೇಳಿದವುಗಳನ್ನು ನಾನು ಮಾಡಿದೆನು” ಎಂದು ಹೇಳಿದನು. ನಂತರ ಹಿಜ್ಕೀಯನು ಬಹಳ ಜೋರಾಗಿ ಗೋಳಾಡಿದನು.


ಜಿಗುಪ್ಸೆಯ ತಿಂಗಳುಗಳನ್ನೂ ಸಂಕಟದ ರಾತ್ರಿಗಳನ್ನೂ ನನಗೆ ನೇಮಿಸಲಾಗಿದೆ.


ಶತ್ರುಗಳು ನನ್ನ ತಲೆಕೂದಲುಗಳಿಗಿಂತ ಹೆಚ್ಚಾಗಿದ್ದಾರೆ. ಅವರು ನಿಷ್ಕಾರಣವಾಗಿ ನನ್ನನ್ನು ದ್ವೇಷಿಸುತ್ತಾರೆ; ನನ್ನನ್ನು ನಾಶಮಾಡಲು ಬಹು ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಶತ್ರಗಳು ನನ್ನ ಬಗ್ಗೆ ಸುಳ್ಳು ಹೇಳುವರು. ನಾನು ಕದ್ದಿಲ್ಲದಿದ್ದರೂ ಸುಳ್ಳು ಅಪವಾದ ಹೊರಿಸಿ ನನ್ನಿಂದ ದಂಡ ವಸೂಲಿ ಮಾಡಿದರು.


‘“ಬಾರೂಕನೇ, ನನಗೆ ತುಂಬ ತೊಂದರೆಯಾಗಿದೆ. ನನ್ನ ನೋವಿನೊಂದಿಗೆ ಯೆಹೋವನು ನನಗೆ ದುಃಖವನ್ನು ಕೊಟ್ಟಿದ್ದಾನೆ. ನಾನು ಬಹಳ ದಣಿದಿದ್ದೇನೆ. ನನ್ನ ಸಂಕಟಗಳಿಂದ ಸೊರಗಿ ಹೋಗಿದ್ದೇನೆ. ವಿಶ್ರಾಂತಿಯನ್ನು ಕಾಣಲೂ ನನಗೆ ಸಾಧ್ಯವಿಲ್ಲ” ಎಂದು ಹೇಳಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು