ಕೀರ್ತನೆಗಳು 6:8 - ಪರಿಶುದ್ದ ಬೈಬಲ್8 ದುಷ್ಟರೇ, ತೊಲಗಿಹೋಗಿರಿ. ಯಾಕೆಂದರೆ ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದುರ್ಜನರೇ ತೊಲಗಿರಿ ನನ್ನಿಂದ ದೂರ I ಪ್ರಭುವಿನ ಕಿವಿಮುಟ್ಟಿದೆ ನನ್ನಾರ್ತ ಸ್ವರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರು ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಕೆಟ್ಟದ್ದನ್ನು ಮಾಡುವವರೇ, ನೀವೆಲ್ಲರು ನನ್ನಿಂದ ತೊಲಗಿಹೋಗಿರಿ, ಏಕೆಂದರೆ ಯೆಹೋವ ದೇವರು ನನ್ನ ಗೋಳಾಟವನ್ನು ಕೇಳಿದ್ದಾರೆ. ಅಧ್ಯಾಯವನ್ನು ನೋಡಿ |
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.