ಕೀರ್ತನೆಗಳು 60:3 - ಪರಿಶುದ್ದ ಬೈಬಲ್3 ನೀನು ನಿನ್ನ ಜನರಿಗೆ ಅನೇಕ ಕಷ್ಟಗಳನ್ನು ಕೊಟ್ಟಿರುವೆ. ನಾವು ಕುಡಿದವರಂತೆ ತೂರಾಡುತ್ತಾ ಬೀಳುತ್ತಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿನ್ನ ಜನರನು ಗುರಿಪಡಿಸಿದೆ ಸಂಕಟಕೆ I ಭ್ರಮಣಗೊಳಿಪ ಮದ್ಯವ ಕುಡಿಸಿದೆ ನಮಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ಭ್ರಮಣಮದ್ಯವನ್ನು ಕುಡಿಸಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿಮ್ಮ ಜನರಿಗೆ ಕಠಿಣ ಕಾಲಗಳನ್ನು ನೀವು ತೋರಿಸಿದ್ದೀರಿ. ನಾವು ಭ್ರಮಣಗೊಳಿಸುವ ದ್ರಾಕ್ಷಾರಸವನ್ನು ಕುಡಿದವರಂತೆ ಆದೆವು. ಅಧ್ಯಾಯವನ್ನು ನೋಡಿ |
ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.