Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 60:8 - ಪರಿಶುದ್ದ ಬೈಬಲ್‌

8 ಮೋವಾಬ್ ನನ್ನ ಸ್ನಾನಪಾತ್ರೆ. ಎದೋಮ್ ನನ್ನ ಪಾದರಕ್ಷೆಗಳ ಸ್ಥಳ. ನಾನು ಫಿಲಿಷ್ಟಿಯರನ್ನು ಸೋಲಿಸಿ ಜಯಘೋಷ ಮಾಡುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; ಎದೋಮ್ ಸೀಮೆ ನನ್ನ ಪಾದರಕ್ಷೆಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯ ದೇಶವೇ ನಾನು ನಿನ್ನ ಮೇಲೆ ಜಯಹೊಂದಿ ನಿನ್ನ ವಿಷಯವಾಗಿ ಜಯಘೋಷ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮೋವಾಬ್ ಪ್ರಾಂತ್ಯವು ನನ್ನ ಸ್ನಾನ ಪಾತ್ರೆಯು I ಎದೋಮ್ ಪ್ರಾಂತ್ಯವು ನನ್ನ ಕೆರಗಳಿಗೆ ಎಡೆಯು I ನನ್ನ ಗೆಲ್ವೆನೆಂದಿತೆ ಫಿಲಿಷ್ಟಿಯ ಪ್ರಾಂತ್ಯವು!” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; ಎದೋಮ್ ಸೀಮೆಯು ನನ್ನ ಕೆರಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯರು ನನ್ನ ವಿಷಯವಾಗಿ ಕೂಗಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮೋವಾಬ್ ನನ್ನ ಸ್ನಾನ ಪಾತ್ರೆಯು, ಎದೋಮ್ ನನ್ನ ಕೆರಗಳ ಸ್ಥಳ. ಫಿಲಿಷ್ಟಿಯರ ಮೇಲೆ ಜಯೋತ್ಸಾಹ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 60:8
10 ತಿಳಿವುಗಳ ಹೋಲಿಕೆ  

ದಾವೀದನು ಎದೋಮಿನ ಎಲ್ಲಾ ಕಡೆಯಲ್ಲೂ ಕಾವಲುದಂಡನ್ನು ಇರಿಸಿದನು. ಎದೋಮಿನ ಜನರೆಲ್ಲರೂ ದಾವೀದನ ಸೇವಕರಾದರು. ದಾವೀದನು ಹೋದ ಕಡೆಗಳಲ್ಲೆಲ್ಲಾ ಯೆಹೋವನು ಜಯವನ್ನು ಉಂಟುಮಾಡಿದನು.


ಅಬ್ಷೈಯು ಎದೋಮಿನಲ್ಲಿ ಕೋಟೆಯನ್ನು ಕಟ್ಟಿ ಎದೋಮ್ಯರೆಲ್ಲರನ್ನು ದಾವೀದನ ಸೇವಕರನ್ನಾಗಿ ಮಾಡಿದನು. ದಾವೀದನು ಹೋದಕಡೆಗಳಲ್ಲೆಲ್ಲಾ ಯೆಹೋವನು ಅವನಿಗೆ ಜಯವನ್ನು ಕೊಟ್ಟನು.


ಇಸ್ರೇಲರು ಬಲಿಷ್ಠರಾಗುವರು. ಅವರು ಎದೋಮ್ ದೇಶವನ್ನು ಪಡೆಯುವರು. ಅವರು ತಮ್ಮ ವೈರಿಯಾದ ಸೇಯೀರನ ದೇಶವನ್ನು ಪಡೆಯುವರು.


ಯೆಹೋವನು ಅವಳಿಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳಿವೆ. ಎರಡು ಕುಟುಂಬಗಳನ್ನು ಆಳುವವರು ನಿನ್ನಲ್ಲಿ ಹುಟ್ಟುವರು; ಅವರು ವಿಭಾಗವಾಗುವರು. ಒಬ್ಬ ಮಗನು ಮತ್ತೊಬ್ಬನಿಗಿಂತ ಬಲಶಾಲಿಯಾಗಿರುವನು. ದೊಡ್ಡ ಮಗನು ಚಿಕ್ಕ ಮಗನ ಸೇವೆ ಮಾಡುವನು” ಎಂದು ಹೇಳಿದನು.


ನೀನು ಕತ್ತಿಯಿಂದಲೇ ಜೀವಿಸುವೆ. ನೀನು ನಿನ್ನ ತಮ್ಮನ ಸೇವಕನಾಗಿರುವೆ. ಆದರೆ ನೀನು ಬಿಡುಗಡೆಯಾಗಲು ಹೋರಾಡಿ ಅವನ ಹಿಡಿತದಿಂದ ಪಾರಾಗುವೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು