Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 61:1 - ಪರಿಶುದ್ದ ಬೈಬಲ್‌

1 ದೇವರೇ, ನನ್ನ ಮೊರೆಯನ್ನು ಕೇಳು. ನನ್ನ ಪ್ರಾರ್ಥನೆಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವಾ ಆಲಿಸೆನ್ನ ಮೊರೆಯನು I ಕಿವಿಗೊಟ್ಟು ಕೇಳೆನ್ನ ಜಪವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ನನ್ನ ಮೊರೆಯನ್ನು ಕೇಳಿರಿ. ನನ್ನ ಪ್ರಾರ್ಥನೆಯನ್ನು ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 61:1
11 ತಿಳಿವುಗಳ ಹೋಲಿಕೆ  

ಯಾವುದರ ಬಗ್ಗೆಯೂ ಚಿಂತಿಸಬೇಡಿ. ಆದರೆ ಪ್ರಾರ್ಥನೆ ಮಾಡುತ್ತಾ ನಿಮ್ಮ ಅಗತ್ಯತೆಗಳಿಗೆಲ್ಲಾ ದೇವರಲ್ಲಿ ವಿಜ್ಞಾಪಿಸಿರಿ. ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.


ನೀತಿಸ್ವರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು! ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು! ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸಿ ಸುರಕ್ಷಿತ ಸ್ಥಳದಲ್ಲಿ ಸೇರಿಸು.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು. ಕರುಣೆಗೋಸ್ಕರ ಮೊರೆಯಿಡುತ್ತಿರುವ ನನಗೆ ಕಿವಿಗೊಡು.


ನನ್ನ ಒಡೆಯನೇ, ನನಗೆ ಕಿವಿಗೊಡು. ನನ್ನ ಮೊರೆಯನ್ನು ಆಲಿಸು.


ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸು! ನಿನ್ನ ಮಹಾಶಕ್ತಿಯಿಂದ ನನ್ನ ನ್ಯಾಯವನ್ನು ಸ್ಥಾಪಿಸು.


ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು. ನನ್ನ ಮೊರೆಯನ್ನು ಆಲೈಸು, ನನ್ನ ಯಥಾರ್ಥವಾದ ಪ್ರಾರ್ಥನೆಗೆ ಕಿವಿಗೊಡು.


ದೇವರೇ, ನನಗೆ ಕಿವಿಗೊಡು. ವೈರಿಯು ನನಗೆ ಬೆದರಿಕೆ ಹಾಕಿದ್ದಾನೆ. ನನ್ನ ಪ್ರಾಣವನ್ನು ರಕ್ಷಿಸು.


ಮಹಾಪವಿತ್ರ ಸ್ಥಳದ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ನಾನು ನಿನ್ನನ್ನು ಕೂಗಿಕೊಳ್ಳುವಾಗ ನನಗೆ ಕಿವಿಗೊಟ್ಟು ಕರುಣಿಸು.


ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು