Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 62:8 - ಪರಿಶುದ್ದ ಬೈಬಲ್‌

8 ಜನರೇ, ಯಾವಾಗಲೂ ದೇವರನ್ನೇ ನಂಬಿಕೊಂಡಿರಿ. ನಿಮ್ಮ ಕಷ್ಟಗಳನ್ನೆಲ್ಲಾ ಆತನಿಗೆ ಹೇಳಿಕೊಳ್ಳಿರಿ. ಆತನೇ ನಮ್ಮ ಆಶ್ರಯಸ್ಥಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಜನರೇ, ಯಾವಾಗಲೂ ಆತನನ್ನೇ ನಂಬಿ ನಿಮ್ಮ ಹೃದಯವನ್ನು ಆತನ ಮುಂದೆ ಬಿಚ್ಚಿರಿ; ದೇವರು ನಮ್ಮ ಆಶ್ರಯವು. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜನರೇ, ಎಲ್ಲಾ ಕಾಲದಲ್ಲಿಯೂ ದೇವರಲ್ಲಿ ಭರವಸೆ ಇಡಿರಿ. ನಿಮ್ಮ ಹೃದಯವನ್ನು ದೇವರ ಮುಂದೆ ಒಯ್ಯಿರಿ. ದೇವರು ನಮಗೆ ಆಶ್ರಯವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 62:8
23 ತಿಳಿವುಗಳ ಹೋಲಿಕೆ  

ಯಾವುದರ ಬಗ್ಗೆಯೂ ಚಿಂತಿಸಬೇಡಿ. ಆದರೆ ಪ್ರಾರ್ಥನೆ ಮಾಡುತ್ತಾ ನಿಮ್ಮ ಅಗತ್ಯತೆಗಳಿಗೆಲ್ಲಾ ದೇವರಲ್ಲಿ ವಿಜ್ಞಾಪಿಸಿರಿ. ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.


ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ. ನಿಮ್ಮ ಹೃದಯವು ನೀರಿನಂತೆ ಹರಿಯಲಿ. ನಿಮ್ಮ ಹೃದಯಸಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ. ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ. ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ. ಹಸಿವೆಯಿಂದ ಮೂರ್ಛೆಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ. ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆಹೋಗುತ್ತಿದ್ದಾರೆ.


ಆದ್ದರಿಂದ ಯೆಹೋವನ ಮೇಲೆ ಯಾವಾಗಲೂ ಭರವಸವಿಡಿರಿ. ಯಾಕೆಂದರೆ ನಿಮಗೆ ದೇವರಾದ ಯೆಹೋವನಲ್ಲಿ ಸುರಕ್ಷತೆಯ ಸ್ಥಳವಿದೆ.


ನನ್ನ ಕಷ್ಟಗಳನ್ನೂ ಚಿಂತೆಗಳನ್ನೂ ಆತನಿಗೆ ಅರಿಕೆಮಾಡಿಕೊಳ್ಳುವೆನು.


ಹನ್ನಳು “ಸ್ವಾಮೀ, ನಾನು ಯಾವುದೇ ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿದಿಲ್ಲ. ನಾನು ಬಹುದುಃಖಿತಳು. ನಾನು ಯೆಹೋವನಲ್ಲಿ ನನ್ನ ಎಲ್ಲ ತೊಂದರೆಗಳನ್ನು ನಿವೇದಿಸಿಕೊಳ್ಳುತ್ತಿದ್ದೆನು.


ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣಾಬಲವೂ ನನ್ನ ದುರ್ಗವೂ ಆಗಿದ್ದಾನೆ.


ಆಗ ನಾನು, ಹಬ್ಬದ ಉತ್ಸಾಹದಲ್ಲಿ ಜನಸಮೂಹದೊಡನೆ ಹರ್ಷಿಸುತ್ತಾ ಸ್ತುತಿಗೀತೆಗಳನ್ನು ಹಾಡುತ್ತಾ ಅವರನ್ನು ದೇವಾಲಯಕ್ಕೆ ಮುನ್ನಡೆಸುತ್ತಿದ್ದದ್ದನ್ನು ನೆನಪಿಗೆ ತಂದುಕೊಂಡು ಹೃದಯದಲ್ಲಿ ಕೊರಗುವೆ.


ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.


ಯೆಹೋವನೇ, ಕಷ್ಟ ಬಂದಾಗ ಜನರಿಗೆ ನಿನ್ನ ನೆನಪಾಗುವುದು. ನೀನು ಅವರನ್ನು ಶಿಕ್ಷಿಸಿದಾಗ ಅವರು ನಿನಗೆ ಮೌನ ಪ್ರಾರ್ಥನೆ ಮಾಡುವರು.


ದೇವರು ನನ್ನನ್ನು ಕೊಂದರೂ ಆತನಲ್ಲಿಯೇ ಭರವಸವಿಟ್ಟಿರುವೆನು. ನನ್ನ ನಡತೆಯ ಕುರಿತು ಆತನ ಮುಂದೆ ವಾದಿಸುವೆನು.


ಹೌದು, ನನ್ನ ಪ್ರಿಯ ಮಕ್ಕಳೇ, ಆತನಲ್ಲಿಯೇ ನೆಲೆಗೊಂಡಿರೋಣ. ನಾವು ಹೀಗೆ ಮಾಡಿದರೆ, ಕ್ರಿಸ್ತನು ಮರಳಿ ಬರುವ ದಿನದಂದು ನಾವು ಭಯಪಡಬೇಕಾಗಿಲ್ಲ; ಅಡಗಿಕೊಳ್ಳುವ ಅಗತ್ಯವಿರುವುದಿಲ್ಲ; ನಾಚಿಕೆಪಡುವ ಅಗತ್ಯವೂ ಇರುವುದಿಲ್ಲ.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು. ಸಹಾಯಕ್ಕಾಗಿ ನಾನಿಡುವ ಮೊರೆಯನ್ನು ಲಾಲಿಸು.


ನೀನು ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದರೆ, ದೀರ್ಘಕಾಲ ಬದುಕುವೆ; ಭೂಮಿಯ ಅನೇಕ ಫಲಗಳನ್ನು ಅನುಭವಿಸುವೆ.


ಯೆಹೋವನಲ್ಲಿ ಭಯಭಕ್ತಿಯುಳ್ಳವನು ಕ್ಷೇಮವಾಗಿರುವನು; ಅವನ ಮಕ್ಕಳು ಸಹ ಕ್ಷೇಮವಾಗಿರುವರು.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.


ಯೆಹೋವನನ್ನು ಗೌರವಿಸುವ ಜನರು ಆತನ ಸೇವಕನ ಮಾತನ್ನು ಕೇಳುವರು. ಆ ಸೇವಕನು ಮುಂದೆ ಸಂಭವಿಸುವುದರ ಬಗ್ಗೆ ಚಿಂತೆ ಇಲ್ಲದೆ ಸಂಪೂರ್ಣವಾಗಿ ದೇವರ ಮೇಲೆ ನಂಬಿಕೆ ಇಡುವನು. ಅವನು ಪರಿಪೂರ್ಣವಾಗಿ ಯೆಹೋವನ ಹೆಸರಿನಲ್ಲಿ ನಂಬಿಕೆ ಇಟ್ಟು ತನ್ನ ದೇವರ ಮೇಲೆ ಅವಲಂಬಿಸಿಕೊಳ್ಳುವನು.


ನಾನು ಯೆಹೋವನಿಗೆ ಪ್ರಾರ್ಥಿಸಲು, ಆತನು ತನ್ನ ಪವಿತ್ರ ಪರ್ವತದಿಂದ ಉತ್ತರಿಸುವನು.


ಆದ್ದರಿಂದ ಭೂಮಿಯು ನಡುಗಿದರೂ ಬೆಟ್ಟಗಳು ಸಮುದ್ರದೊಳಗೆ ಮುಳುಗಿಹೋದರೂ ನಮಗೇನೂ ಭಯವಿಲ್ಲ.


ನಾನು ಅನೇಕರಿಗೆ ಮಾದರಿಯಾಗಿದ್ದೇನೆ. ಯಾಕೆಂದರೆ ನೀನೇ ನನ್ನ ಶಕ್ತಿಗೆ ಆಧಾರ.


ನಾನು ಯೆಹೋವನಿಗೆ, “ನೀನೇ ನನ್ನ ಆಶ್ರಯಸ್ಥಾನವೂ ನನ್ನ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ” ಎಂದು ಹೇಳುವೆನು.


ನನಗಾದರೋ ಯೆಹೋವನು ಪರ್ವತದ ಮೇಲಿರುವ ಆಶ್ರಯಸ್ಥಾನವಾಗಿದ್ದಾನೆ. ನನ್ನ ಬಂಡೆಯಾಗಿರುವ ದೇವರು ನನಗೆ ಆಶ್ರಯಗಿರಿಯಾಗಿದ್ದಾನೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು