ಕೀರ್ತನೆಗಳು 63:6 - ಪರಿಶುದ್ದ ಬೈಬಲ್6 ಹಾಸಿಗೆಯು ಮೇಲೆ ಮಲಗಿರುವಾಗಲೂ ನಿನ್ನನ್ನು ಜ್ಞಾಪಿಸಿಕೊಳ್ಳುವೆನು. ಮಧ್ಯರಾತ್ರಿಯಲ್ಲಿಯೂ ನಿನ್ನನ್ನು ನೆನಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ, ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿದ್ರಿಸುವಾಗಲು ಮಾಡುವೆ ನಿನ್ನ ಸ್ಮರಣೆ I ರಾತ್ರಿಯೆಲ್ಲ ನಿನ್ನ ಧ್ಯಾನವೆ ನನಗೆ ಜಾಗರಣೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನನ್ನ ಹಾಸಿಗೆಯ ಮೇಲೆ ನಿಮ್ಮನ್ನು ಸ್ಮರಿಸುವಾಗ ರಾತ್ರಿಯ ಜಾವಗಳಲ್ಲಿ ನಿಮ್ಮನ್ನು ಧ್ಯಾನಿಸುತ್ತಿರುವೆನು. ಅಧ್ಯಾಯವನ್ನು ನೋಡಿ |
ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ. ನಿಮ್ಮ ಹೃದಯವು ನೀರಿನಂತೆ ಹರಿಯಲಿ. ನಿಮ್ಮ ಹೃದಯಸಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ. ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ. ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ. ಹಸಿವೆಯಿಂದ ಮೂರ್ಛೆಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ. ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆಹೋಗುತ್ತಿದ್ದಾರೆ.