Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 64:2 - ಪರಿಶುದ್ದ ಬೈಬಲ್‌

2 ನನ್ನ ಶತ್ರುಗಳ ಒಳಸಂಚುಗಳಿಂದ ನನ್ನನ್ನು ಸಂರಕ್ಷಿಸು. ಆ ದುಷ್ಟರಿಗೆ ಸಿಕ್ಕದಂತೆ ನನ್ನನ್ನು ಮರೆಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದುಷ್ಟರ ಒಳಸಂಚಿಗೂ, ಕೆಡುಕರ ಗುಪ್ತ ಆಲೋಚನೆಗೂ ಸಿಕ್ಕದಂತೆ, ನನ್ನನ್ನು ತಪ್ಪಿಸಿ ಭದ್ರಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ತಪ್ಪಿಸೆನ್ನ ಕೆಡುಕರ ಕುತಂತ್ರದಿಂದ I ಕಾದಿರಿಸೆನ್ನ ದುರುಳರ ದೊಂಬಿಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದುಷ್ಟರ ಒಳಸಂಚಿಗೂ ಕೆಡುಕರ ದೊಂಬಿಗೂ ಸಿಕ್ಕದಂತೆ ನನ್ನನ್ನು ತಪ್ಪಿಸಿ ಭದ್ರಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದುರ್ಮಾರ್ಗಿಗಳ ಗುಪ್ತ ಆಲೋಚನೆಗಳಿಗೂ, ದುಷ್ಟರ ಒಳಸಂಚಿಗೂ ನನ್ನನ್ನು ಮರೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 64:2
20 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ; ಶತ್ರುಗಳಿಂದ ನನ್ನನ್ನು ರಕ್ಷಿಸು.


ಆ ದುಷ್ಟರಿಂದ ನನ್ನನ್ನು ವಿಮೋಚಿಸು. ಆ ಕೊಲೆಪಾತಕರಿಂದ ನನ್ನನ್ನು ರಕ್ಷಿಸು.


ಜನರು ನನ್ನ ವಿರುದ್ಧ ಕೆಲಸ ಮಾಡುತ್ತಿದ್ದಾರೆಂಬುದನ್ನು ಯೆಹೋವನು ನನಗೆ ತೋರಿಸುವ ಮುಂಚೆ ನಾನು ವಧೆಗಾಗಿ ತೆಗೆದುಕೊಂಡು ಹೋದ ಸಾಧುಕುರಿಯಂತೆ ಇದ್ದೆನು. ಅವರು ನನ್ನ ವಿರೋಧಿಗಳೆಂದು ನಾನು ತಿಳಿದುಕೊಂಡಿರಲಿಲ್ಲ. ಅವರು ನನ್ನ ಬಗ್ಗೆ ಹೀಗೆ ಹೇಳುತ್ತಿದ್ದರು: “ಮರವನ್ನು ಮತ್ತು ಅದರ ಫಲಗಳನ್ನು ನಾಶಮಾಡೋಣ; ಅವನನ್ನು ಕೊಂದುಬಿಡೋಣ; ಜನರು ಅವನನ್ನು ಮರೆತುಬಿಡುವರು.”


ನೀತಿವಂತರಿಗೆ ಕೇಡುಮಾಡಲು ಕೆಡುಕರು ಒಟ್ಟಾಗಿ ಸೇರಿದ್ದಾರೆ. ನೀನಾದರೋ ನೀತಿವಂತರನ್ನು ಮರೆಮಾಡಿ ಕಾಪಾಡುವೆ; ಅವರನ್ನು ನಿನ್ನ ಆಶ್ರಯಸ್ಥ್ಥಾನದಲ್ಲಿ ಅಡಗಿಸಿಡುವೆ.


ನಾನು ಅಪಾಯದಲ್ಲಿರುವಾಗ ಯೆಹೋವನು ನನ್ನನ್ನು ಸಂರಕ್ಷಿಸುತ್ತಾನೆ; ತನ್ನ ಗುಡಾರದಲ್ಲಿ ನನ್ನನ್ನು ಅಡಗಿಸುತ್ತಾನೆ. ಸುರಕ್ಷಿತವಾದ ಸ್ಥಳಕ್ಕೆ ನನ್ನನ್ನು ಕೊಂಡೊಯ್ಯುವನು.


ಯೆಹೋವನೇ, ನನ್ನನ್ನು ಕೊಲ್ಲಲು ಅವರು ಹಾಕಿದ ಯೋಜನೆಗಳನ್ನೆಲ್ಲ ನೀನು ಬಲ್ಲೆ. ಅವರ ಅಪರಾಧಗಳನ್ನು ಮನ್ನಿಸಬೇಡ. ಅವರ ಪಾಪಗಳನ್ನು ಅಳಿಸಬೇಡ. ನನ್ನ ವೈರಿಗಳನ್ನು ನಾಶಪಡಿಸು, ನೀನು ಕೋಪದಲ್ಲಿದ್ದಾಗ ಆ ಜನರನ್ನು ಶಿಕ್ಷಿಸು.


ಅವರು ಒಟ್ಟುಗೂಡಿ ನನ್ನನ್ನು ಕೊಲ್ಲಲು ನನ್ನ ಹೆಜ್ಜೆಯನ್ನೇ ಹಿಂಬಾಲಿಸಿಕೊಂಡು ಬರುತ್ತಾರೆ.


ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ. ಎಷ್ಟೋ ಜನರು ನನಗೆ ಶತ್ರುಗಳಾಗಿ ನಿಂತಿದ್ದಾರೆ.


ಅಲ್ಲದೆ ಪೌಲನನ್ನು ಜೆರುಸಲೇಮಿಗೆ ಮರಳಿ ಕಳುಹಿಸಿಕೊಡಬೇಕೆಂದು ಅವರು ಫೆಸ್ತನನ್ನು ಕೇಳಿಕೊಂಡರು. ಅವರು ಪೌಲನನ್ನು ಮಾರ್ಗದಲ್ಲೇ ಕೊಲ್ಲಬೇಕೆಂಬ ಯೋಜನೆ ಮಾಡಿಕೊಂಡಿದ್ದರು.


ಹೀಗಿದ್ದಲ್ಲಿ ರಾಜನು ಮಳೆಯಲ್ಲಿ ಆಶ್ರಯ ಸ್ಥಳವಾಗಿಯೂ ಗಾಳಿಯಲ್ಲಿ ಮರೆಯಂತೆಯೂ ಮರುಭೂಮಿಯಲ್ಲಿ ಒರತೆಯಂತೆಯೂ ಬೆಂಗಾಡಿನಲ್ಲಿ ಬಂಡೆಯ ನೆರಳಿನಂತೆಯೂ ಇರುವನು.


ಅವುಗಳ ರಾಜರುಗಳೂ ನಾಯಕರುಗಳೂ ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ.


ಯೆಹೋವನು ಕಾಯಿನನಿಗೆ, “ಏಕೆ ಕೋಪಗೊಂಡಿರುವೆ? ನಿನ್ನ ಮುಖ ವ್ಯಸನದಿಂದಿರುವುದೇಕೆ?


ಯೆಹೋವನೇ, ನನ್ನ ಮಾತನ್ನು ಆಲಿಸು, ನನ್ನ ವಾದವನ್ನು ಆಲಿಸಿ ಯಾರು ಹೇಳುವುದು ಸರಿ ಎನ್ನುವುದನ್ನು ನಿರ್ಣಯಿಸು.


ಉಳಿದ ಯೆಹೂದ್ಯರು, “ಈ ಸಂಗತಿಗಳು ನಿಜವಾಗಿಯೂ ಸತ್ಯವಾದುವುಗಳು!” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು