ಕೀರ್ತನೆಗಳು 64:5 - ಪರಿಶುದ್ದ ಬೈಬಲ್5 ಕೇಡುಮಾಡಲು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ ಬಲೆಯೊಡ್ಡಲು ಆಲೋಚಿಸುವರು. “ತಮ್ಮ ಬಲೆಗಳು ಯಾರಿಗೂ ಕಾಣುವುದಿಲ್ಲ” ಎಂದು ಮಾತಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕೆಟ್ಟದನು ಮಾಡಲು ಮನದಟ್ಟುಮಾಡಿಕೊಂಡಿಹರು I “ಗುಟ್ಟಾಗಿಡೋಣ ಉರುಲು, ಕಾಂಬರಾರು?” ಎನ್ನುತಿಹರು? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ - ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು ಅಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ತಮ್ಮೊಳಗೆ ಕೇಡನ್ನು ಪ್ರೋತ್ಸಾಹ ಮಾಡುತ್ತಾರೆ. ರಹಸ್ಯವಾಗಿ ಬಲೆಗಳನ್ನು ಒಡ್ಡುವುದಕ್ಕೆ ಮಾತನಾಡುತ್ತಾ, “ನಮ್ಮನ್ನು ಕಾಣುವವರು ಯಾರು?” ಎಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿ |
ಇಸ್ರೇಲರು ಯೆಹೋವನ ಬಳಿಗೆ ಹೋಗಿ ಸಾಯಂಕಾಲದವರೆಗೂ ಮೊರೆಯಿಟ್ಟರು. “ನಾವು ಮತ್ತೆ ಬೆನ್ಯಾಮೀನ್ಯರೊಡನೆ ಯುದ್ಧ ಮಾಡಲು ಹೋಗಬೇಕೇ? ಅವರು ನಮ್ಮ ಬಂಧುಗಳು” ಎಂದು ಅವರು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಹೋಗಿರಿ, ಅವರ ವಿರುದ್ಧ ಯುದ್ಧ ಮಾಡಿರಿ” ಎಂದು ಉತ್ತರಿಸಿದನು. ಇಸ್ರೇಲರು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿದರು. ಮೊದಲನೇ ದಿನದಂತೆ ಅವರು ಮತ್ತೊಮ್ಮೆ ಯುದ್ಧಕ್ಕೆ ಹೋದರು.