ಕೀರ್ತನೆಗಳು 65:11 - ಪರಿಶುದ್ದ ಬೈಬಲ್11 ಹೊಸ ವರ್ಷವನ್ನು ಸಮೃದ್ಧಿಕರವಾದ ಸುಗ್ಗಿಯೊಂದಿಗೆ ಆರಂಭಿಸುವಾತನು ನೀನೇ. ಅನೇಕ ಬೆಳೆಗಳಿಂದ ಬಂಡಿಗಳನ್ನು ತುಂಬಿಸುವಾತನು ನೀನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ; ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ ಸಮೃದ್ಧಿಕರವಾದ ವೃಷ್ಟಿಯು ಸುರಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಋತು ಶಿಶಿರಕೆ ಸುಗ್ಗಿಯ ಸೊಬಗಿನ ಮುಕುಟವ ಮುಡಿಸಿದ್ದೀ I ನೀ ನಡೆವ ಹಾದಿಯಲ್ಲೆಲ್ಲಾ ತುಳುಕುತಿದೆ ಸಮೃದ್ಧಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದೀ; ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ ಸಮೃದ್ಧಿಕರವಾದ ವೃಷ್ಟಿಯು ಸುರಿಯುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ವರ್ಷಕ್ಕೆ ನಿಮ್ಮ ಉದಾರತೆಯ ಕಿರೀಟವನ್ನು ಇಡುತ್ತೀರಿ. ನಿಮ್ಮ ಹಾದಿಗಳು ಸಮೃದ್ಧಿಯಿಂದ ತುಂಬಿ ಪ್ರವಾಹಿಸುತ್ತಿದೆ. ಅಧ್ಯಾಯವನ್ನು ನೋಡಿ |
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.