Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 65:3 - ಪರಿಶುದ್ದ ಬೈಬಲ್‌

3 ನಮ್ಮ ಪಾಪಗಳು ಹೊರಲಾರದಷ್ಟು ಭಾರವಾಗಿವೆ; ನಮ್ಮನ್ನು ಆ ಪಾಪಗಳಿಂದ ಬಿಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪಾಪದ ಹೊರೆ ಹೊತ್ತವರು ನಾವಯ್ಯಾ I ಅವುಗಳ ಪರಿಹಾರಕನು ನೀನಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾವು ನಮ್ಮ ಪಾಪಗಳಿಂದ ತುಂಬಿಹೋಗಿರುವಾಗ ನೀವೇ ನಮ್ಮ ದ್ರೋಹಗಳಿಗಾಗಿ ದೋಷಪರಿಹಾರಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 65:3
21 ತಿಳಿವುಗಳ ಹೋಲಿಕೆ  

ನಾನು ಅಪರಾಧಿಯಾಗಿದ್ದೇನೆ. ನನ್ನ ಅಪರಾಧಗಳು ನನ್ನ ಭುಜಗಳ ಮೇಲೆ ಭಾರವಾದ ಹೊರೆಯಂತಿವೆ.


ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.


ನಮ್ಮ ರಕ್ಷಕನಾದ ದೇವರೇ, ನಮಗೆ ಸಹಾಯಮಾಡು! ನಿನ್ನ ಹೆಸರಿನ ಘನತೆಗಾಗಿ ನಮಗೆ ಸಹಾಯಮಾಡು! ನಮ್ಮನ್ನು ರಕ್ಷಿಸಿ ನಿನ್ನ ಹೆಸರಿನ ಘನತೆಗೋಸ್ಕರ ನಮ್ಮ ಪಾಪಗಳನ್ನು ಅಳಿಸಿಬಿಡು.


ನಮ್ಮ ಶರೀರಭಾವವು ದೇವರಾತ್ಮನಿಗೆ ವಿರುದ್ಧವಾದ ಸಂಗತಿಗಳನ್ನು ಬಯಸುತ್ತದೆ. ದೇವರಾತ್ಮನು ನಮ್ಮ ಶರೀರಭಾವಕ್ಕೆ ವಿರುದ್ಧವಾದ ಸಂಗತಿಗಳನ್ನು ಬಯಸುತ್ತಾನೆ. ಆದ್ದರಿಂದ ನೀವು ನಿಜವಾಗಿಯೂ ಬಯಸುವಂಥವುಗಳನ್ನು ಮಾಡಲಾಗದಂತೆ ಅವು ಒಂದಕ್ಕೊಂದು ಹೋರಾಡುತ್ತವೆ.


ಆ ಸೆರಾಫಿಯನು ಉರಿಯುವ ಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿದನು. ಆಗ ಆ ದೂತನು, “ಇಗೋ, ಈ ಉರಿಯುವ ಕೆಂಡವು ನಿನ್ನ ತುಟಿಗಳಿಗೆ ತಗಲಿದ್ದರಿಂದ ನೀನು ಮಾಡಿದ ಕೆಟ್ಟಕಾರ್ಯಗಳೆಲ್ಲಾ ನಿನ್ನಿಂದ ತೊಲಗಿ ಹೋದವು. ಈಗ ನಿನ್ನ ಪಾಪವು ಅಳಿಸಿಹಾಕಲ್ಪಟ್ಟಿದೆ” ಎಂದು ಹೇಳಿದನು.


ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ ಅವರು ಅಸಂಖ್ಯಾತರಾಗಿದ್ದಾರೆ. ನನ್ನ ಪಾಪಗಳು ನನ್ನನ್ನು ಹಿಡಿದಿರುವುದರಿಂದ ಅವುಗಳಿಂದ ತಪ್ಪಿಸಿಕೊಳ್ಳಲಾರೆ. ನನ್ನ ತಲೆಯ ಕೂದಲುಗಳಿಗಿಂತಲೂ ನನ್ನ ಪಾಪಗಳು ಹೆಚ್ಚಾಗಿವೆ. ನಾನು ಧೈರ್ಯವನ್ನು ಕಳೆದುಕೊಂಡಿರುವೆ.


ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;


ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸ ಬುಗ್ಗೆಯ ನೀರು ಚಿಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ಹಿಸ್ಸೋಪ್ ಗಿಡದ ಬರಲಿನಿಂದ ನನ್ನನ್ನು ತೊಳೆದು ಶುದ್ಧೀಕರಿಸು; ನಾನು ಹಿಮಕ್ಕಿಂತಲೂ ಬಿಳುಪಾಗುವ ತನಕ ನನ್ನನ್ನು ತೊಳೆ!


ಯೆಹೋವನು ಅವನಿಗೆ ಹೀಗೆ ಹೇಳಿದನು: “ನಿನ್ನ ಪ್ರಾರ್ಥನೆಯು ನನಗೆ ಕೇಳಿಸಿತು. ನಿನ್ನ ಬಿನ್ನಹಗಳನ್ನು ಆಲಿಸಿದೆನು. ಈ ಆಲಯವನ್ನು ನೀನು ಕಟ್ಟಿಸಿದೆ. ನಾನು ಅದನ್ನು ಪವಿತ್ರಸ್ಥಳವನ್ನಾಗಿ ಮಾಡಿದೆ. ಆದ್ದರಿಂದ ನಾನಿಲ್ಲಿ ಸದಾಕಾಲ ಸನ್ಮಾನಿಸಲ್ಪಡುವೆನು. ನನ್ನ ದೃಷ್ಟಿಯೂ ಮನಸ್ಸೂ ಸದಾ ಅದರ ಮೇಲಿರುತ್ತದೆ.


ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಈ ಸಂದೇಶವನ್ನು ಕಳುಹಿಸಿದನು: “ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ಅಶ್ಶೂರದ ರಾಜನಾದ ಸನ್ಹೇರೀಬನ ವಿರುದ್ಧವಾಗಿ ನೀವು ನನ್ನಲ್ಲಿ ಪಾರ್ಥಿಸಿರುವಿರಿ. ನಾನು ನಿಮ್ಮ ಪ್ರಾರ್ಥನೆಯನ್ನು ಕೇಳಿದ್ದೇನೆ.


“ಹಿಂದಿರುಗಿ ಹೋಗಿ, ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಇದನ್ನು ಹೇಳು: ‘ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದೆನು; ನಿನ್ನ ಕಣ್ಣೀರನ್ನು ನೋಡಿದೆನು. ಆದ್ದರಿಂದ ನಾನು ನಿನ್ನನ್ನು ಗುಣಪಡಿಸುತ್ತೇನೆ. ಮೂರನೆಯ ದಿನ, ನೀನು ದೇವಾಲಯಕ್ಕೆ ಹೋಗುವೆ.


ಪ್ರತಿಯೊಂದು ಆರಾಧನಾ ದಿನದಲ್ಲಿ ಪ್ರತಿಯೊಬ್ಬರೂ ಬಂದು ನನ್ನನ್ನು ಆರಾಧಿಸುವರು. ಪ್ರತಿಯೊಂದು ಸಬ್ಬತ್ ದಿನದಲ್ಲೂ ತಿಂಗಳ ಮೊದಲ ದಿನದಲ್ಲೂ ಅವರು ನನ್ನ ಬಳಿಗೆ ಬರುವರು.”


ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು