ಕೀರ್ತನೆಗಳು 65:5 - ಪರಿಶುದ್ದ ಬೈಬಲ್5 ನಮ್ಮ ರಕ್ಷಕನಾದ ದೇವರೇ, ನೀತಿವಂತರ ಪ್ರಾರ್ಥನೆಗೆ ಸದುತ್ತರವನ್ನು ದಯಪಾಲಿಸು; ಅವರಿಗೋಸ್ಕರ ಮಹತ್ಕಾರ್ಯಗಳನ್ನು ನಡೆಸು. ಸರ್ವಭೂನಿವಾಸಿಗಳ ನಂಬಿಕೆಗೆ ನೀನೇ ಆಧಾರ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದೇವಾ, ನೀನೆ ನಮ್ಮೆಲ್ಲರ ಜೀವೋದ್ಧಾರ I ದೂರದ ಸಾಗರ ಸೀಮೆಗಳಿಗೂ ಆಶಾಧಾರ I ಗಂಭೀರ ಕಾರ್ಯವೆಸಗಿ ನೀಡುವೆ ವಿಜಯದುತ್ತರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡಿಸಿ ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂವಿುಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅತಿಶಯ ಹಾಗು ನೀತಿಯ ಕೃತ್ಯಗಳನ್ನು ನಡೆಸಿ, ನೀವು ನಮಗೆ ಉತ್ತರ ಕೊಡುವಿರಿ. ನಮ್ಮ ರಕ್ಷಣೆಯ ದೇವರೇ, ಭೂಮಿಯಲ್ಲಿರುವವರಿಗೂ, ಸಮುದ್ರದ ಆಚೆ ದೂರವಾಗಿರುವವರಿಗೂ ನೀವು ಭರವಸೆಯಾಗಿದ್ದೀರಿ. ಅಧ್ಯಾಯವನ್ನು ನೋಡಿ |
ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.
ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!