Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 65:7 - ಪರಿಶುದ್ದ ಬೈಬಲ್‌

7 ಭೋರ್ಗರೆಯುವ ಸಮುದ್ರಗಳನ್ನೂ ಅನ್ಯಜನಾಂಗಗಳ ದಂಗೆಯನ್ನೂ ಶಾಂತಗೊಳಿಸುವಾತನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಭೋರ್ಗರೆವ ಸಮುದ್ರಗಳನು, ಗರ್ಜಿಸುವ ತರಂಗಗಳನು I ದೊಂಬಿಯೇಳುವ ಜನಾಂಗಗಳನು ಶಮನಗೊಳಿಸುವವನು ನೀನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸಮುದ್ರತರಂಗಗಳ ಘೋಷವನ್ನು ತಡೆಯುವವನೂ ಜನಾಂಗಗಳ ದೊಂಬಿಯನ್ನು ಶಾಂತಿಪಡಿಸುವವನೂ ಆಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸಮುದ್ರಗಳ ಘೋಷವನ್ನೂ, ಅವುಗಳ ತೆರೆಗಳ ಘೋಷವನ್ನೂ, ಪ್ರಜೆಗಳ ಕೋಲಾಹಲವನ್ನೂ ಶಮನಗೊಳಿಸುವವರು ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 65:7
17 ತಿಳಿವುಗಳ ಹೋಲಿಕೆ  

ಸಮುದ್ರವು ನಿನ್ನ ಅಧೀನದಲ್ಲಿದೆ. ಅದರ ರೋಷದ ಅಲೆಗಳನ್ನು ನೀನು ಶಾಂತಗೊಳಿಸುವೆ.


ಆತನು, “ನಾನೇ ಯೇಸು” ಎಂದಾಗ ಅವರು ಹಿಂದೆ ಸರಿದು ನೆಲದ ಮೇಲೆ ಬಿದ್ದರು.


ಆತನು ಬಿರುಗಾಳಿಯನ್ನು ನಿಲ್ಲಿಸಿ ಅಲೆಗಳನ್ನು ಶಾಂತಗೊಳಿಸಿದನು.


ದೇವರೇ, ನೀನು ದುಷ್ಟರನ್ನು ದಂಡಿಸುವಾಗ ಜನರು ನಿನ್ನನ್ನು ಕೊಂಡಾಡುವರು; ನಿನ್ನ ಕೋಪವನ್ನು ತೋರಿಸುವಾಗ ಅಳಿದುಳಿದವರು ಬಲಿಷ್ಠರಾಗುವರು.


ಆ ಜನರು ಯೋನನನ್ನು ಸಮುದ್ರದೊಳಗೆ ಬಿಸಾಡಿಬಿಟ್ಟರು. ಆಗ ಬಿರುಗಾಳಿಯು ನಿಂತಿತು. ಸಮುದ್ರವು ಶಾಂತವಾಯಿತು.


ಆದರೆ ಯೆಹೋವನು ಸಮುದ್ರದ ಮೇಲೆ ದೊಡ್ಡ ಬಿರುಗಾಳಿ ಬೀಸುವಂತೆ ಮಾಡಿದನು. ಬಿರುಗಾಳಿಯು ಸಮುದ್ರದಲ್ಲಿ ದೊಡ್ಡ ಅಲೆಗಳನ್ನು ಎಬ್ಬಿಸಿತು. ಬಿರುಗಾಳಿಯು ಬಲವಾಗಿದ್ದುದರಿಂದ ಹಡಗು ಒಡೆದುಹೋಗುವುದರಲ್ಲಿತ್ತು.


ನಿನ್ನ ವೈರಿಗಳ ಆರ್ಭಟವನ್ನು ಮರೆತುಬಿಡಬೇಡ. ಅವರು ನಿನಗೆ ಪದೇಪದೇ ಅವಮಾನಮಾಡಿದರು.


ಯೆಹೋವನೇ ರಾಜನು. ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ. ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು. ಅದು ಕದಲುವುದೇ ಇಲ್ಲ.


ದೇವರು ತನ್ನ ಶಕ್ತಿಯಿಂದ ಭೂಲೋಕವನ್ನು ಸೃಷ್ಟಿಸಿದನು. ದೇವರು ತನ್ನ ಜ್ಞಾನದಿಂದ ಈ ಜಗತ್ತನ್ನು ನಿರ್ಮಿಸಿದನು. ತನ್ನ ವಿವೇಕದಿಂದ ದೇವರು ಈ ಭೂಮಂಡಲದ ಮೇಲೆ ಆಕಾಶವನ್ನು ಹೊದಿಸಿದ್ದಾನೆ.


ಪಿಲಾತನು, “ನಾನು ಬರೆದಿರುವುದನ್ನು ಬದಲಾಯಿಸಲಾಗುವುದಿಲ್ಲ” ಎಂದು ಉತ್ತರಕೊಟ್ಟನು.


ಪಟ್ಟಣದ ಅಧಿಕಾರಿಯು ಈ ಸಂಗತಿಗಳನ್ನು ಹೇಳಿದ ಬಳಿಕ ಮನೆಗೆ ಹೋಗಬೇಕೆಂದು ಜನರಿಗೆ ತಿಳಿಸಿದನು. ಆಗ ಅವರೆಲ್ಲರು ಹೊರಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು