ಕೀರ್ತನೆಗಳು 66:10 - ಪರಿಶುದ್ದ ಬೈಬಲ್10 ಜನರು ಬೆಳ್ಳಿಯನ್ನು ಬೆಂಕಿಯಿಂದ ಶೋಧಿಸುವಂತೆ ದೇವರು ನಮ್ಮನ್ನು ಪರೀಕ್ಷಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದೇವರೇ, ನಮ್ಮನ್ನು ಶೋಧಿಸಿದಿ; ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹೇ ದೇವಾ, ನೀ ನಮ್ಮನ್ನು ಪರಿಶೋಧಿಸಿದೆ I ಪುಟಕ್ಕಿಟ್ಟ ಚಿನ್ನದಂತೆ ಶುದ್ಧೀಕರಿಸಿದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೇವರೇ, ನಮ್ಮನ್ನು ಶೋಧಿಸಿದಿ; ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೇವರೇ, ನೀವು ನಮ್ಮನ್ನು ಪರಿಶೋಧಿಸಿದ್ದೀರಿ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶುದ್ಧೀಕರಿಸಿದ್ದೀರಿ. ಅಧ್ಯಾಯವನ್ನು ನೋಡಿ |
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.