ಈಗ ನನ್ನ ಕೋಪದ ದೆಸೆಯಿಂದ ನಿನಗೆ ಹಾನಿ ಮಾಡಿದವರನ್ನು ಶಿಕ್ಷಿಸುವೆನು. ಅವರು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದರು. ‘ನಮ್ಮ ಮುಂದೆ ಸಾಷ್ಟಾಂಗಬೀಳು. ಆಗ ನಿನ್ನ ಮೇಲೆ ನಾವು ನಡೆಯುವೆವು’ ಎಂದು ಹೇಳಿದರು. ಅವರಿಗೆ ಅಡ್ಡಬೀಳಲು ನಿನ್ನನ್ನು ಬಲಾತ್ಕರಿಸಿದರು. ಆ ಬಳಿಕ ಅವರು ನೀನು ಮಣ್ಣಿನ ಧೂಳೋ ಎಂಬಂತೆ ನಿನ್ನ ಬೆನ್ನಿನ ಮೇಲೆ ನಡೆದಾಡಿದರು. ನೀನು ಅವರಿಗೆ ನಡೆಯಲು ಬೀದಿಯಾದಿ.”
ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ಯೋಬನ ತಾಳ್ಮೆಯ ಬಗ್ಗೆ ನಿಮಗೆ ತಿಳಿದಿದೆ. ಯೋಬನು ಎಲ್ಲಾ ಬಗೆಯ ಸಂಕಟಗಳನ್ನು ಅನುಭವಿಸಿದ ಮೇಲೆ ಪ್ರಭುವು ಅವನಿಗೆ ಸಹಾಯ ಮಾಡಿದನು. ಪ್ರಭುವು ದಯೆಯಿಂದಲೂ ಕರುಣೆಯಿಂದಲೂ ತುಂಬಿದ್ದಾನೆಂದು ಇದು ತೋರಿಸುತ್ತದೆ.
“ಅದಕ್ಕೆ ಅಬ್ರಹಾಮನು, ‘ಕಂದಾ, ನಿನ್ನ ಜೀವಮಾನದ ದಿನಗಳು ನಿನಗೆ ನೆನಪಿಲ್ಲವೇ? ಅಲ್ಲಿ ನಿನಗೆ ಎಲ್ಲ ಬಗೆಯ ಸುಖವಿತ್ತು. ಆದರೆ ಲಾಜರಿನಿಗಾದರೋ ಕಷ್ಟಗಳೇ ತುಂಬಿಕೊಂಡಿದ್ದವು. ಆದ್ದರಿಂದ ಈಗ ಅವನು ಸುಖಪಡುತ್ತಿದ್ದಾನೆ, ನೀನು ಸಂಕಟಪಡುತ್ತಿರುವೆ.
ಆಗ ನೆಬೂಕದ್ನೆಚ್ಚರನು ಉರಿಯುವ ಕೊಂಡದ ಬಾಯಿಯ ಬಳಿಗೆ ಹೋಗಿ, “ಮಹೋನ್ನತನಾದ ದೇವರ ಸೇವಕರಾದ ಶದ್ರಕ್, ಮೇಶಕ್, ಅಬೆದ್‌ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ” ಎಂದು ಕೂಗಿದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಬೆಂಕಿಯೊಳಗಿಂದ ಹೊರಗೆ ಬಂದರು.