ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.