Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 66:8 - ಪರಿಶುದ್ದ ಬೈಬಲ್‌

8 ಜನಾಂಗಗಳೇ, ನಮ್ಮ ದೇವರನ್ನು ಕೊಂಡಾಡಿರಿ. ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜನಾಂಗಗಳೇ, ನಮ್ಮ ದೇವರನ್ನು ವಂದಿಸಿರಿ; ಆತನನ್ನು ಸ್ತುತಿಸುವ ಧ್ವನಿ ಕೇಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜನಾಂಗಗಳೇ, ನಮಿಸಿರಿ ನಮ್ಮ ದೇವನನು I ಗಟ್ಟಿಯಾಗಿ ಮಾಡಿರಿ ಅವನ ಗುಣಗಾನವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಜನಾಂಗಗಳೇ, ನಮ್ಮ ದೇವರನ್ನು ವಂದಿಸಿರಿ; ಆತನನ್ನು ಸ್ತುತಿಸುವ ಧ್ವನಿ ಕೇಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸಮಸ್ತ ಜನರೇ, ನೀವು ನಮ್ಮ ದೇವರನ್ನು ಸ್ತುತಿಸಿರಿ. ದೇವರನ್ನು ಸ್ತುತಿಸುವ ಶಬ್ದವು ಕೇಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 66:8
9 ತಿಳಿವುಗಳ ಹೋಲಿಕೆ  

ಭೂನಿವಾಸಿಗಳೆಲ್ಲರೇ, ಯೆಹೋವನಿಗೆ ಆನಂದ ಘೋಷಮಾಡಿರಿ. ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ!


ಇದಾದ ಬಳಿಕ, ಪರಲೋಕದಲ್ಲಿ ಅನೇಕಾನೇಕ ಜನರ ಮಹಾಶಬ್ದವೋ ಎಂಬಂತೆ ಇದ್ದ ಧ್ವನಿಯನ್ನು ಕೇಳಿದೆನು. ಆ ಜನರು ಹೀಗೆ ಹೇಳುತ್ತಿದ್ದರು: “ಹಲ್ಲೆಲೂಯಾ, (ದೇವರಿಗೆ ಸ್ತೋತ್ರ ಮಾಡಿರಿ) ಜಯವೂ ಪ್ರಭಾವವೂ ಅಧಿಕಾರವೂ ನಮ್ಮ ದೇವರಿಗೆ ಸೇರಿದ್ದಾಗಿವೆ.


ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.


ಆತನ ಹೆಸರಿನ ಮಹಿಮೆಯನ್ನು ಕೀರ್ತಿಸಿರಿ. ಸ್ತುತಿಗೀತೆಗಳಿಂದ ಆತನನ್ನು ಸನ್ಮಾನಿಸಿರಿ.


ಸರ್ವಜನಾಂಗಗಳೇ, ಚಪ್ಪಾಳೆ ತಟ್ಟಿರಿ; ದೇವರಿಗೆ ಆನಂದಘೋಷ ಮಾಡಿರಿ!


“ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವದು; ಯಾಕೆಂದರೆ ಆತನು ಅವರನ್ನು ಸಾಯಿಸುವನು; ತನ್ನ ಸೇವಕರನ್ನು ಸಂಹರಿಸುವವರನ್ನು ಶಿಕ್ಷಿಸುವನು; ತನ್ನ ವೈರಿಗಳಿಗೆ ತಕ್ಕ ದಂಡನೆ ಕೊಡುವನು. ತನ್ನ ದೇಶವನ್ನೂ ತನ್ನ ಜನರನ್ನೂ ಶುದ್ಧಿ ಮಾಡುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು