ಕೀರ್ತನೆಗಳು 68:11 - ಪರಿಶುದ್ದ ಬೈಬಲ್11 ದೇವರು ಆಜ್ಞಾಪಿಸಲು ಅನೇಕರು ಈ ಸುವಾರ್ತೆಯನ್ನು ಸಾರಲು ಹೋದರು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕರ್ತನು ಆಜ್ಞಾಪಿಸಿದನು; ಶುಭವಾರ್ತೆಯನ್ನು ಪ್ರಸಿದ್ಧಪಡಿಸುವ ಸ್ತ್ರೀಸಮೂಹವು ಎಷ್ಟೋ ದೊಡ್ಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹೊರಡಿಸಿದನು ಪ್ರಭು ಶುಭವಾರ್ತೆಯೊಂದನು I ಹರಡಿತು ಜನಸ್ತೋಮ ಆ ಸಂದೇಶವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕರ್ತನು ನುಡಿದನು; ಶುಭವಾರ್ತೆಯನ್ನು ಪ್ರಸಿದ್ಧಪಡಿಸುವ ಸ್ತ್ರೀ ಸಮೂಹವು ಎಷ್ಟೋ ದೊಡ್ಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರು ವಾಕ್ಯವನ್ನು ಕೊಟ್ಟರು. ಆ ವಾಕ್ಯವನ್ನು ಹೀಗೆಂದು ಪ್ರಕಟಿಸಿದ ಮಹಿಳೆಯರ ಗುಂಪು ದೊಡ್ಡದಾಗಿತ್ತು: ಅಧ್ಯಾಯವನ್ನು ನೋಡಿ |
ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.