Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:14 - ಪರಿಶುದ್ದ ಬೈಬಲ್‌

14 ಸಲ್ಮೋನ್ ಪರ್ವತದ ಮೇಲೆ ದೇವರು ಶತ್ರು ರಾಜರುಗಳನ್ನು ಚದರಿಸಿಬಿಟ್ಟನು. ಅವರು ಸುರಿಯುತ್ತಿರುವ ಹಿಮದಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸರ್ವಶಕ್ತನು ಅಲ್ಲಿ ರಾಜರನ್ನು ಚದುರಿಸಿದಾಗ, ಸಲ್ಮೋನಿನ ಮೇಲೆ ಹಿಮವು ಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವಶಕ್ತನು ಅರಸರನತ್ತ ಸದೆಬಡಿದಂತೆ I ಇತ್ತ ಬೀಳುತ್ತಿತ್ತು ಸಾಲ್ಮೋನ್ ಗಿರಿಮೇಲೆ ಹಿಮಗಡ್ಡೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸರ್ವಶಕ್ತನು ಅಲ್ಲಿ ರಾಜರನ್ನು ಚದರಿಸಿದಾಗ ಸಲ್ಮೋನಿನ ಮೇಲೆ ಹಿಮವು ಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸರ್ವಶಕ್ತರಾದ ದೇವರು ಅರಸರನ್ನು ಅಲ್ಲಿ ಚದರಿಸಿದಾಗ ಸಲ್ಮೋನಿನಲ್ಲಿ ಬಿಳೀ ಹಿಮ ಬಿದ್ದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:14
10 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ: “ಬನ್ನಿರಿ, ನಾವು ಚರ್ಚೆ ಮಾಡೋಣ. ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಅವುಗಳನ್ನು ತೊಳೆದಾಗ ನೀವು ಹಿಮದಂತೆ ಬಿಳುಪಾಗುವಿರಿ. ನಿಮ್ಮ ಪಾಪಗಳು ಕಿರಮಂಜಿಬಣ್ಣವಾಗಿದ್ದರೂ ನೀವು ಉಣ್ಣೆಯಂತೆ ಬೆಳ್ಳಗಾಗುವಿರಿ.


ಹಿಸ್ಸೋಪ್ ಗಿಡದ ಬರಲಿನಿಂದ ನನ್ನನ್ನು ತೊಳೆದು ಶುದ್ಧೀಕರಿಸು; ನಾನು ಹಿಮಕ್ಕಿಂತಲೂ ಬಿಳುಪಾಗುವ ತನಕ ನನ್ನನ್ನು ತೊಳೆ!


ಆದ್ದರಿಂದ ಅಬೀಮೆಲೆಕ ಮತ್ತು ಅವನ ಜನರು ಚಲ್ಮೋನ್ ಬೆಟ್ಟವನ್ನು ಹತ್ತಿಹೋದರು. ಅಬೀಮೆಲೆಕನು ಒಂದು ಕೊಡಲಿಯನ್ನು ತೆಗೆದುಕೊಂಡು ಕೆಲವು ಕೊಂಬೆಗಳನ್ನು ಕಡಿದನು. ಅವನು ಆ ಕೊಂಬೆಗಳನ್ನು ಹೊತ್ತುಕೊಂಡು ಹೊರಟನು. ಅಬೀಮೆಲೆಕನು ತನ್ನ ಸಂಗಡಿಗರಿಗೆ, “ನಾನು ಮಾಡಿದಂತೆಯೇ ನೀವು ಬೇಗನೆ ಮಾಡಿರಿ” ಎಂದನು.


ಇಸ್ರೇಲಿನ ಜನರು ಯೆಹೋವನಿಗೆ ಒಂದು ಪವಿತ್ರವಾದ ಕಾಣಿಕೆಯಾಗಿದ್ದರು. ಅವರು ಯೆಹೋವನ ಬೆಳೆಯ ಪ್ರಥಮ ಫಲವಾಗಿದ್ದರು. ಇಸ್ರೇಲಿನ ಜನರನ್ನು ಪೀಡಿಸಲು ಪ್ರಯತ್ನಿಸಿದವರನ್ನು ಯಾರಾದರೂ ಆಗಿರಲಿ, ದೋಷಿಗಳೆಂದು ನಿರ್ಣಯಿಸಲಾಗುತ್ತಿತ್ತು. ಆ ಕೆಟ್ಟ ಜನರಿಗೆ ಕೇಡಾಗುತ್ತಿತ್ತು.’” ಇದು ಯೆಹೋವನ ಸಂದೇಶ.


ಯೆಹೋಶುವನು ಜೀವಂತವಿರುವವರೆಗೆ ಇಸ್ರೇಲರು ಯೆಹೋವನನ್ನು ಸೇವಿಸಿದರು. ಯೆಹೋಶುವನ ಮರಣಾನಂತರ ಬದುಕಿದ್ದ ಹಿರಿಯರ ಜೀವಮಾನದಲ್ಲಿಯೂ ಇಸ್ರೇಲರು ಯೆಹೋವನ ಸೇವೆಯನ್ನು ಮುಂದುವರಿಸಿಕೊಂಡು ಬಂದರು. ಈ ಹಿರಿಯರು ಇಸ್ರೇಲರಿಗಾಗಿ ಯೆಹೋವನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ನೋಡಿದ್ದರು.


ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸಲು ಸಹಾಯಮಾಡಿದ್ದರಿಂದ ಅವರು ಕಾನಾನ್ಯರನ್ನೂ ಅವರ ಗ್ರಾಮಗಳನ್ನೂ ಸಂಪೂರ್ಣವಾಗಿ ನಾಶಮಾಡಿಬಿಟ್ಟರು. ಆದ್ದರಿಂದ ಆ ಪ್ರದೇಶಕ್ಕೆ ಹೊರ್ಮಾ ಎಂದು ಹೆಸರಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು