Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:16 - ಪರಿಶುದ್ದ ಬೈಬಲ್‌

16 ಬಾಷಾನ್ ಪರ್ವತವೇ, ಚೀಯೋನ್ ಪರ್ವತವನ್ನು ನೀನು ಕೀಳಾಗಿ ಕಾಣುವುದೇಕೆ? ಯೆಹೋವನು ತನಗೆ ಪ್ರಿಯವಾದ ಚೀಯೋನ್ ಪರ್ವತವನ್ನೇ ತನ್ನ ಶಾಶ್ವತ ವಾಸಸ್ಥಾನವಾಗಿ ಆರಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಎಲೈ, ಶಿಖರೋನ್ನತಪರ್ವತಗಳೇ, ದೇವರು ತನ್ನ ನಿವಾಸಕ್ಕಾಗಿ ಆರಿಸಿಕೊಂಡಿರುವ ಈ ಪರ್ವತವನ್ನು ನೀವು ಓರೆಗಣ್ಣಿನಿಂದ ನೋಡುವುದೇಕೆ? ಯೆಹೋವನು ಸದಾಕಾಲವೂ ಇದರಲ್ಲೇ ವಾಸಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೂ ದೇವನಾರಿಸಿದ ಗಿರಿಯನು I ಆತ ಬಯಸಿದ ಆ ಚಿರ ನಿವಾಸವನು I ನೀ ಓರೆಗಣ್ಣಿಂದ ಕಾಣುವೆಯೇನು? I ಎಲೈ ಶಿಖರೋನ್ನತ ಪರ್ವತವೇ, ಪೇಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಎಲೈ ಶಿಖರೋನ್ನತಪರ್ವತಗಳೇ, ದೇವರು ತನ್ನ ನಿವಾಸಾರ್ಥವಾಗಿ ಆರಿಸಿಕೊಂಡಿರುವ ಈ ಪರ್ವತವನ್ನು ನೀವು ಓರೆಗಣ್ಣಿನಿಂದ ನೋಡುವದೇಕೆ? ಯೆಹೋವನು ಸದಾಕಾಲವೂ ಇದರಲ್ಲೇ ವಾಸಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಉನ್ನತ ಬೆಟ್ಟಗಳೇ, ಏಕೆ ಕುಣಿಯುತ್ತೀರಿ? ದೇವರು ನಿವಾಸಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಯೆಹೋವ ದೇವರು ಅದರಲ್ಲಿ ಸದಾಕಾಲವೂ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:16
10 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.


ಕೊನೆಯ ದಿನಗಳಲ್ಲಿ ಯೆಹೋವನಾಲಯದ ಪರ್ವತವು ಎಲ್ಲಾ ಬೆಟ್ಟಗಳಿಗಿಂತಲೂ ಮಹೋನ್ನತವಾದ ಪರ್ವತವಾಗಿರುವುದು.


ಬೆಟ್ಟಗಳೇ, ನೀವೇಕೆ ಟಗರುಗಳಂತೆಯೂ ಗುಡ್ಡಗಳೇ, ನೀವೇಕೆ ಕುರಿಮರಿಗಳಂತೆಯೂ ನೃತ್ಯಮಾಡಿದಿರಿ?


ಬೆಟ್ಟಗಳು ಟಗರುಗಳಂತೆಯೂ ಗುಡ್ಡಗಳು ಕುರಿಮರಿಗಳಂತೆಯೂ ನೃತ್ಯಮಾಡಿದವು.


ಯೆಹೋವನು ಅವನಿಗೆ ಹೀಗೆ ಹೇಳಿದನು: “ನಿನ್ನ ಪ್ರಾರ್ಥನೆಯು ನನಗೆ ಕೇಳಿಸಿತು. ನಿನ್ನ ಬಿನ್ನಹಗಳನ್ನು ಆಲಿಸಿದೆನು. ಈ ಆಲಯವನ್ನು ನೀನು ಕಟ್ಟಿಸಿದೆ. ನಾನು ಅದನ್ನು ಪವಿತ್ರಸ್ಥಳವನ್ನಾಗಿ ಮಾಡಿದೆ. ಆದ್ದರಿಂದ ನಾನಿಲ್ಲಿ ಸದಾಕಾಲ ಸನ್ಮಾನಿಸಲ್ಪಡುವೆನು. ನನ್ನ ದೃಷ್ಟಿಯೂ ಮನಸ್ಸೂ ಸದಾ ಅದರ ಮೇಲಿರುತ್ತದೆ.


ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು