Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:19 - ಪರಿಶುದ್ದ ಬೈಬಲ್‌

19 ನಮ್ಮ ಅನುದಿನದ ಭಾರವನ್ನು ಹೊರುವ ಯೆಹೋವನಿಗೆ ಸ್ತೋತ್ರವಾಗಲಿ! ನಮ್ಮನ್ನು ರಕ್ಷಿಸುವವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅನುದಿನವೂ ನಮ್ಮ ಭಾರವನ್ನು ಹೊರುತ್ತಿರುವ ಕರ್ತನಿಗೆ ಸ್ತೋತ್ರವಾಗಲಿ. ನಮ್ಮನ್ನು ರಕ್ಷಿಸುವ ದೇವರು ಆತನೇ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸ್ತುತಿಯಾಗಲಿ ನಮ್ಮನುದ್ಧರಿಸುವಾ ದೇವನಿಗೆ I ನಮ್ಮನನುದಿನ ಬಿಡದೆ ಸಹಿಸಿಕೊಳ್ಳುವಾ ಪ್ರಭುವಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅನುದಿನವೂ ನಮ್ಮ ಭಾರವನ್ನು ಹೊರುವ ಕರ್ತನಿಗೆ ಸ್ತೋತ್ರವಾಗಲಿ. ನಮ್ಮನ್ನು ರಕ್ಷಿಸುವ ದೇವರು ಆತನೇ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಪ್ರತಿದಿನವೂ ನಮ್ಮ ಭಾರವನ್ನು ಹೊರುವ ಕರ್ತದೇವರಿಗೆ ಸ್ತೋತ್ರ. ನಮ್ಮನ್ನು ರಕ್ಷಿಸುವ ದೇವರು ಸ್ತುತಿಹೊಂದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:19
9 ತಿಳಿವುಗಳ ಹೋಲಿಕೆ  

ನೀವು ಹುಟ್ಟಿದಾಗ ನಾನು ನಿಮ್ಮನ್ನು ಹೊತ್ತುಕೊಂಡೆನು. ನೀವು ಮುದುಕರಾಗುವಾಗಲೂ ನಾನು ನಿಮ್ಮನ್ನು ಹೊತ್ತುಕೊಳ್ಳುವೆನು. ನಿಮ್ಮ ತಲೆಕೂದಲು ನರೆತಾಗಲೂ ನಾನು ನಿಮ್ಮನ್ನು ಹೊರುವೆನು; ಯಾಕೆಂದರೆ ನಾನು ನಿಮ್ಮನ್ನು ಸೃಷ್ಟಿಸಿದೆನು. ಆದ್ದರಿಂದ ನಾನು ನಿಮ್ಮನ್ನು ಹೊತ್ತುಕೊಳ್ಳುವೆನು, ನಿಮ್ಮನ್ನು ರಕ್ಷಿಸುವೆನು.”


ಪ್ರತಿ ಮುಂಜಾನೆಯೂ ಆತನು ಅದನ್ನು ಹೊಸ ರೀತಿಗಳಲ್ಲಿ ತೋರಿಸುವನು. ಯೆಹೋವನೇ, ನೀನು ಎಷ್ಟೋ ಸತ್ಯವಂತನು ಮತ್ತು ನಂಬಿಗಸ್ತನು!


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ಪರಲೋಕದಲ್ಲಿರುವ ಪ್ರತಿಯೊಂದು ಆಶೀರ್ವಾದಗಳನ್ನು ದೇವರು ನಮಗೆ ಕ್ರಿಸ್ತನಲ್ಲಿ ದಯಪಾಲಿಸಿದ್ದಾನೆ.


ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು. ಆತನು ನಿನ್ನನ್ನು ಉದ್ಧಾರ ಮಾಡುವನು. ಸಜ್ಜನರಿಗೆ ಸೋಲಾಗಲು ಯೆಹೋವನೆಂದಿಗೂ ಬಿಡನು.


ನಮ್ಮ ರಕ್ಷಕನಾದ ದೇವರೇ, ನೀತಿವಂತರ ಪ್ರಾರ್ಥನೆಗೆ ಸದುತ್ತರವನ್ನು ದಯಪಾಲಿಸು; ಅವರಿಗೋಸ್ಕರ ಮಹತ್ಕಾರ್ಯಗಳನ್ನು ನಡೆಸು. ಸರ್ವಭೂನಿವಾಸಿಗಳ ನಂಬಿಕೆಗೆ ನೀನೇ ಆಧಾರ.


ನೀನು ನನಗೆ ಆಶ್ರಯದುರ್ಗವಾಗಿರುವೆ. ಇಕ್ಕಟ್ಟುಗಳಲ್ಲಿ ನೀನು ನನ್ನನ್ನು ಸುತ್ತುವರಿದು ಕಾಪಾಡುವೆ. ಆದ್ದರಿಂದ ನಿನ್ನ ರಕ್ಷಣೆಯ ಕುರಿತು ಹಾಡಿಕೊಂಡಾಡುವೆ.


ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಮುಖ್ಯವಾಗಿವೆ. ಅವು ಅಸಂಖ್ಯಾತವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು