Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:23 - ಪರಿಶುದ್ದ ಬೈಬಲ್‌

23 ಆಗ ನೀನು ಅವರ ರಕ್ತದಲ್ಲಿ ಕಾಲಾಡಿಸುವೆ. ನಿನ್ನ ನಾಯಿಗಳು ಅವರ ರಕ್ತವನ್ನು ನೆಕ್ಕುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ನೀನು ನಿನ್ನ ಶತ್ರುಗಳ ರಕ್ತದಲ್ಲಿ ಕಾಲಾಡಿಸುವಿ. ನಿನ್ನ ನಾಯಿಗಳ ನಾಲಿಗೆಗಳಿಗೆ ವೈರಿಗಳ ದೇಹದಲ್ಲಿ ಪಾಲುಸಿಕ್ಕುವುದು” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ನೀನು ನಿನ್ನ ಶತ್ರುಗಳ ರಕ್ತದಲ್ಲಿ ಕಾಲಾಡಿಸುವಿ. ನಿನ್ನ ನಾಯಿಗಳ ನಾಲಿಗೆಗಳಿಗೆ ವೈರಿಗಳ ದೇಹದಲ್ಲಿ ಪಾಲುಸಿಕ್ಕುವದು ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ನಿಮ್ಮ ಪಾದಗಳು ನಿಮ್ಮ ವೈರಿಗಳ ರಕ್ತದ ಮೇಲಿರಲಿ. ನಾಯಿಗಳು ಅದನ್ನು ನೆಕ್ಕಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:23
7 ತಿಳಿವುಗಳ ಹೋಲಿಕೆ  

ದುಷ್ಟರಿಗಾಗುವ ಪ್ರತಿದಂಡನೆಯನ್ನು ನೀತಿವಂತರು ಕಂಡು ಹರ್ಷಿಸುವರು; ಆ ದುಷ್ಟರ ರಕ್ತದಲ್ಲಿ ಕಾಲಾಡಿಸುವರು.


ಯೆಹೋವನಾದ ನಾನು ಅವನಿಗೆ ಹೀಗೆ ಹೇಳಿದೆನೆಂದು ತಿಳಿಸು: ‘ಅಹಾಬನೇ! ನೀನು ನಾಬೋತನನ್ನು ಕೊಂದುಹಾಕಿದೆ. ಈಗ ನೀನು ಅವನ ದ್ರಾಕ್ಷಿತೋಟವನ್ನು ತೆಗೆದುಕೊಳ್ಳುತ್ತಿರುವೆ. ಆದ್ದರಿಂದ ನಾನಿದನ್ನು ನಿನಗೆ ಹೇಳುತ್ತೇನೆ! ನಾಬೋತನು ಸತ್ತ ಸ್ಥಳದಲ್ಲಿಯೇ ನೀನು ಸಹ ಸಾಯುವೆ. ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನೂ ನೆಕ್ಕುತ್ತವೆ!’”


ಆ ಜನರು ಅಹಾಬನ ರಥವನ್ನು ಸಮಾರ್ಯದ ಕೊಳದ ನೀರಿನಲ್ಲಿ ತೊಳೆದರು. ರಥದಲ್ಲಿದ್ದ ರಾಜನಾದ ಅಹಾಬನ ರಕ್ತವನ್ನು ನಾಯಿಗಳು ನೆಕ್ಕಿದವು. ದೇವದಾಸಿಯರು ಆ ಕೊಳದ ನೀರನ್ನು ಸ್ನಾನಕ್ಕೆ ಉಪಯೋಗಿಸುತ್ತಿದ್ದರು. ಯೆಹೋವನು ಹೇಳಿದ್ದ ರೀತಿಯಲ್ಲಿಯೇ ಈ ಸಂಗತಿಗಳು ಸಂಭವಿಸಿದವು.


ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಂಡುಹಿಡಿದು ಅಲ್ಲಿಂದ ತೆಗೆದುಬಿಡುವೆನು. ಸಮುದ್ರ ತಳದಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಚ್ಚುವಂತೆ ನಾನು ಸರ್ಪಕ್ಕೆ ಆಜ್ಞಾಪಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು