ಕೀರ್ತನೆಗಳು 68:24 - ಪರಿಶುದ್ದ ಬೈಬಲ್24 ಇಗೋ, ದೇವರು ವಿಜಯದ ಮೆರವಣಿಗೆಯನ್ನು ನಡೆಸಿಕೊಂಡು ಹೋಗುತ್ತಿದ್ದಾನೆ. ನನ್ನ ರಾಜನಾದ ಪರಿಶುದ್ಧ ದೇವರು ವಿಜಯದ ಮೆರವಣಿಗೆಯನ್ನು ನಡೆಸಿಕೊಂಡು ಹೋಗುತ್ತಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ದೇವರೇ, ನಿನ್ನ ಮೆರವಣಿಗೆ ಶೋಭಿಸುತ್ತದೆ; ನನ್ನ ಅರಸನಾದ ದೇವರು ತನ್ನ ಪರಿಶುದ್ಧಾಲಯಕ್ಕೆ ಮೆರವಣಿಗೆಯಾಗಿ ಪ್ರವೇಶಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಕಂಗೊಳಿಸುತಿದೆ ದೇವ, ನಿನ್ನ ಭವ್ಯ ಮೆರವಣಿಗೆ I ನನ್ನರಸ ದೇವನು ನಡೆವ ತನ್ನಾ ಗರ್ಭಗುಡಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ದೇವರೇ, ನಿನ್ನ ಮೆರವಣಿಗೆ ಶೋಭಿಸುತ್ತದೆ; ನನ್ನ ಅರಸನಾದ ದೇವರು ತನ್ನ ಪರಿಶುದ್ಧಾಲಯಕ್ಕೆ ಮೆರವಣಿಗೆಯಾಗಿ ಚಿತ್ತೈಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ದೇವರೇ, ನಿಮ್ಮ ಮೆರವಣಿಗೆಯು ಪ್ರಕಟವಾಗಿದೆ. ನನ್ನ ಅರಸರಾಗಿರುವ ದೇವರ ಮೆರವಣಿಗೆಯು ಪರಿಶುದ್ಧ ಸ್ಥಳವನ್ನು ಪ್ರವೇಶಿಸುವುದು. ಅಧ್ಯಾಯವನ್ನು ನೋಡಿ |