Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:26 - ಪರಿಶುದ್ದ ಬೈಬಲ್‌

26 ಮಹಾಸಭೆಯಲ್ಲಿ ದೇವರಿಗೆ ಸ್ತೋತ್ರವಾಗಲಿ! ಇಸ್ರೇಲ್ ಜನರೇ, ಯೆಹೋವನಿಗೆ ಸ್ತೋತ್ರಮಾಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “ಇಸ್ರಾಯೇಲ್ ವಂಶಸ್ಥರೇ, ಸಮೂಹವಾಗಿ ದೇವರಾದ ಕರ್ತನನ್ನು ಕೊಂಡಾಡಿರಿ” ಎಂದು ಹಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ಇಸ್ರಯೇಲಿನ ವಂಶಜರೇ, ಸ್ತುತಿಸಿರಿ ಪ್ರಭುವನು” ಎನ್ನುತಿಹರು I “ಸಭೆ ಸಮ್ಮುಖದಲಿ ಕೊಂಡಾಡಿರಿ ದೇವರನು” ಎಂದು ಹಾಡುತಿಹರು I

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇಸ್ರಾಯೇಲ್‍ಸಂಭವರೇ, ಸಮ್ಮೇಳವಾಗಿ ದೇವನಾದ ಕರ್ತನನ್ನು ಕೊಂಡಾಡಿರಿ ಎಂದು ಹಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಮಹಾಸಭೆಯಲ್ಲಿ ದೇವರನ್ನು ಸ್ತುತಿಸಿರಿ. ಇಸ್ರಾಯೇಲರ ಸಮೂಹದವರಲ್ಲಿ ಯೆಹೋವ ದೇವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:26
10 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ, “ಯಾಕೋಬನ ಮನೆತನದವರೇ, ನನ್ನ ಮಾತುಗಳನ್ನು ಕೇಳಿರಿ. ಜನರು ನಿಮ್ಮನ್ನು ಇಸ್ರೇಲ್ ಎಂದು ಕರೆಯುತ್ತಾರೆ. ನೀವು ಯೆಹೂದದ ಕುಟುಂಬದವರು. ನೀವು ಯೆಹೋವನ ಹೆಸರಿನಲ್ಲಿ ಒಡಂಬಡಿಕೆ ಮಾಡಿಕೊಳ್ಳುವಿರಿ. ನೀವು ಯೆಹೋವನ ನಾಮವನ್ನು ಸ್ತುತಿಸುವಿರಿ, ಆದರೆ ನೀವು ಇವುಗಳನ್ನು ಮಾಡುವಾಗ ನಂಬಿಗಸ್ತರಾಗಿರುವದಿಲ್ಲ; ಯಥಾರ್ಥರಾಗಿರುವುದಿಲ್ಲ.


ಇಸ್ರೇಲ್ ಸುರಕ್ಷಿತವಾಗಿ ಜೀವಿಸುವುದು. ಯಾಕೋಬನ ಬಾವಿ ಅವರ ವಶದಲ್ಲಿದೆ. ಧಾನ್ಯದ ಮತ್ತು ದ್ರಾಕ್ಷಾರಸದ ದೇಶವು ಅವರಿಗೆ ದೊರಕುತ್ತದೆ. ಆ ದೇಶಕ್ಕೆ ಅಧಿಕವಾಗಿ ಮಳೆ ಸುರಿಯುವುದು.


ಯೆಹೋವನಿಗೆ ಸ್ತೋತ್ರವಾಗಲಿ! ನೀತಿವಂತರ ಸಭೆಯಲ್ಲಿ ನಾನು ಪೂರ್ಣಹೃದಯದಿಂದ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವೆನು.


ನಾನು ಎಲ್ಲಾ ಅಪಾಯಗಳಿಂದ ಪಾರಾಗಿದ್ದೇನೆ. ಯೆಹೋವನೇ, ನಿನ್ನ ಭಕ್ತರ ಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು.


ಬೇರೆ ಸ್ತ್ರೀಯರಲ್ಲಿ ನೀನು ಮಕ್ಕಳನ್ನು ಪಡೆಯುವುದು ಒಳ್ಳೆಯದಲ್ಲ.


ಆತನನ್ನು ಮಹಾಸಭೆಯಲ್ಲಿ ಸ್ತುತಿಸಿರಿ. ಹಿರಿಯರ ಸಭೆಯಲ್ಲಿ ಆತನನ್ನು ಕೊಂಡಾಡಿರಿ.


ಆರೋನನ ಅಕ್ಕ ಮಿರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಮಿರ್ಯಾಮಳು ಮತ್ತು ಸ್ತ್ರೀಯರು ಹಾಡುವುದಕ್ಕೂ ಕುಣಿಯುವುದಕ್ಕೂ ಪ್ರಾರಂಭಿಸಿದರು.


ದೇವರ ಮಕ್ಕಳು ಹಬ್ಬಗಳನ್ನು ಆಚರಿಸಲು ಜೆರುಸಲೇಮಿಗೆ ಹೋಗುವರು. ಅವರು ಸಂತೋಷದಿಂದ ಹಾಡುತ್ತಾ ಕುಣಿದಾಡುವರು. “ಒಳ್ಳೆಯವುಗಳೆಲ್ಲ ಬರುವುದು ಜೆರುಸಲೇಮಿನಿಂದಲೇ” ಎಂದು ಅವರು ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು