Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:34 - ಪರಿಶುದ್ದ ಬೈಬಲ್‌

34 ದೇವರ ಬಲವನ್ನು ಕೊಂಡಾಡಿರಿ. ಆತನ ಗಾಂಭೀರ್ಯವು ಇಸ್ರೇಲರ ಆಶ್ರಯವಾಗಿದೆ. ಆತನ ಶಕ್ತಿಯು ಆಕಾಶಗಳಲ್ಲಿ ವ್ಯಾಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ದೇವರ ಪ್ರತಾಪವನ್ನು ಕೊಂಡಾಡಿರಿ. ಆತನ ಗಾಂಭೀರ್ಯವು ಇಸ್ರಾಯೇಲರ ಆಶ್ರಯವಾಗಿದೆ; ಆತನ ಶಕ್ತಿಯು ಮೇಘಮಾರ್ಗದಲ್ಲೆಲ್ಲಾ ವ್ಯಾಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಸಾರಿರಿ ದೇವರಾ ಶಕ್ತಿಸಾಮರ್ಥ್ಯವನು I ಇಸ್ರಯೇಲಿಗೆ ತೋರಿದಾ ಪ್ರಭಾವವನು I ಗಗನವನು ಆವರಿಸಿರುವಾ ಪ್ರತಿಭೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ದೇವರ ಪ್ರತಾಪವನ್ನು ಕೊಂಡಾಡಿರಿ. ಆತನ ಗಾಂಭೀರ್ಯವು ಇಸ್ರಾಯೇಲ್ಯರ ಆಶ್ರಯವಾಗಿದೆ; ಆತನ ಶಕ್ತಿಯು ಮೇಘಮಾರ್ಗದಲ್ಲೆಲ್ಲಾ ವ್ಯಾಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ದೇವರ ಶಕ್ತಿಯನ್ನು ಘೋಷಿಸಿರಿ. ಇಸ್ರಾಯೇಲರ ಮೇಲೆ ಅವರ ಪ್ರಭಾವವಿರುತ್ತದೆ. ಮೇಘಗಳಲ್ಲಿ ಅವರ ಶಕ್ತಿಯು ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:34
9 ತಿಳಿವುಗಳ ಹೋಲಿಕೆ  

ನಂತರ ಅನೇಕಾನೇಕ ಜನರ ಮಹಾಶಬ್ದದಂತಿದ್ದ ಧ್ವನಿಯೊಂದು ನನಗೆ ಕೇಳಿಸಿತು. ಅದು ಪ್ರವಾಹದ ನೀರಿನ ಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇತ್ತು. ಆ ಜನರು ಹೀಗೆ ಹೇಳುತ್ತಿದ್ದರು: “ಹಲ್ಲೆಲೂಯಾ! ನಮ್ಮ ದೇವರಾದ ಪ್ರಭುವು ಆಳಲಾರಂಭಿಸಿದ್ದಾನೆ. ಆತನು ಸರ್ವಶಕ್ತನಾಗಿದ್ದಾನೆ.


ಆತನು ಅತ್ಯಂತ ಪ್ರಭಾವವುಳ್ಳ (ದೇವರ) ಸ್ವರವನ್ನು ಕೇಳಿದನು. ಆಗಲೇ ಆತನು ತಂದೆಯಾದ ದೇವರಿಂದ ಮಾನವನ್ನೂ ಪ್ರಭಾವವನ್ನೂ ಹೊಂದಿಕೊಂಡನು. ಆ ಸ್ವರವು, “ಈತನು ನನ್ನ ಪ್ರಿಯ ಮಗ. ಈತನನ್ನು ಬಹಳವಾಗಿ ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.


ಯೆಹೋವನಿಗೆ ಸ್ತೋತ್ರವಾಗಲಿ! ದೇವರನ್ನು ಆತನ ಆಲಯದಲ್ಲಿ ಸ್ತುತಿಸಿರಿ! ಆತನ ಶಕ್ತಿಯನ್ನು ಪರಲೋಕದಲ್ಲಿ ಸ್ತುತಿಸಿರಿ!


“ಯೆಶುರೂನೇ, ನಮ್ಮ ದೇವರ ಹಾಗೆ ಬೇರೆ ದೇವರುಗಳಿಲ್ಲ. ಆತನು ಮೋಡಗಳ ಮೇಲೆ ಮಹಿಮಾರೂಢನಾಗಿ ಸವಾರಿ ಮಾಡುತ್ತಾ ಆಕಾಶದಿಂದ ನಿಮ್ಮ ಸಹಾಯಕ್ಕೆ ಬರುವನು.


ಆತನು ನಿರಂತರಕ್ಕೂ ಜೀವಿಸುವವನಾಗಿದ್ದಾನೆ. ಆತನೇ ನಿಮ್ಮ ಆಶ್ರಯಸ್ಥಾನ. ಆತನ ಸಾಮರ್ಥ್ಯ ಸದಾಕಾಲವಿರುವುದು. ಆತನು ನಿಮ್ಮನ್ನು ಸಂರಕ್ಷಿಸಿ ಕಾಪಾಡುವನು; ನಿಮ್ಮ ದೇಶವನ್ನು ಬಿಟ್ಟುಹೋಗಲು ಜನರನ್ನು ದೂಡುವನು; ‘ವೈರಿಗಳನ್ನು ನಾಶಮಾಡಿರಿ’ ಎಂದು ಹೇಳುವನು.


ಯೆಹೋವನ ಸ್ವರವು ಆತನ ಶಕ್ತಿಯನ್ನೂ ಮಹಿಮೆಯನ್ನೂ ತೋರ್ಪಡಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು