ಕೀರ್ತನೆಗಳು 68:5 - ಪರಿಶುದ್ದ ಬೈಬಲ್5 ದೇವರು ತನ್ನ ಪವಿತ್ರ ಆಲಯದಲ್ಲಿ, ಅನಾಥರಿಗೆ ತಂದೆಯೂ ವಿಧವೆಯರಿಗೆ ಪಾಲಕನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ, ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದಿವ್ಯಧಾಮದಲ್ಲಿಹ ಆ ದೇವ I ತಬ್ಬಲಿಗೆ ತಂದೆ, ವಿಧವೆಗಾಶ್ರಯ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ದೇವರು ತಮ್ಮ ಪರಿಶುದ್ಧ ಸ್ಥಳದಲ್ಲಿ ದಿಕ್ಕಿಲ್ಲದವರಿಗೆ ತಂದೆ, ವಿಧವೆಯರಿಗೆ ರಕ್ಷಕರಾಗಿದ್ದಾರೆ. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.