Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:6 - ಪರಿಶುದ್ದ ಬೈಬಲ್‌

6 ದೇವರು ಒಬ್ಬಂಟಿಗರಿಗೆ ಸಂಸಾರವನ್ನು ದಯಪಾಲಿಸುವನು. ಆತನು ತನ್ನ ಜನರನ್ನು ಸೆರೆಯಿಂದ ಬಿಡಿಸಿ ಸಂತೋಷಗೊಳಿಸುವನು. ದೇವದ್ರೋಹಿಗಳಾದರೋ ಉರಿಬಿಸಿಲಿನ ಸೆರೆಯಲ್ಲಿ ಉಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ; ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ. ದ್ರೋಹಿಗಳಾದರೋ ಮರುಭೂಮಿಯಲ್ಲಿ ಉಳಿಯಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀಡುವನು ಮಡದಿ ಮಕ್ಕಳನು ಒಂಟಿಗನಿಗೆ I ಬಿಡುಗಡೆಯ ಭಾಗ್ಯವನು ನೊಂದ ಬಂಧಿಗಳಿಗೆ I ದ್ರೋಹಿಗಳಿಗಾದರೋ ಮರಳುಗಾಡೇ ಮಾಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ; ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ. ದ್ರೋಹಿಗಳಾದರೋ ಮರುಭೂವಿುಯಲ್ಲಿ ಉಳಿಯಬೇಕಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರು ಒಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾರೆ. ಸೆರೆಯವರನ್ನು ಹರ್ಷಗೊಳಿಸಿ ಬಿಡುಗಡೆ ಮಾಡುತ್ತಾರೆ. ಆದರೆ ಎದುರು ಬೀಳುವವರು ಒಣಭೂಮಿಯಲ್ಲಿ ವಾಸಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:6
18 ತಿಳಿವುಗಳ ಹೋಲಿಕೆ  

ಆತನು ಬಂಜೆಗೆ ಮಕ್ಕಳನ್ನು ಅನುಗ್ರಹಿಸಿ ಸಂತೋಷಪಡಿಸುವನು. ಯೆಹೋವನಿಗೆ ಸ್ತೋತ್ರವಾಗಲಿ!


ಯೆಹೋವನು ಬಡವರಿಗೂ ನಿಸ್ಸಹಾಯಕರಿಗೂ ಕಿವಿಗೊಡುತ್ತಾನೆ. ಸೆರೆಯಲ್ಲಿರುವ ತನ್ನ ಜನರನ್ನು ಸಹ ಕಡೆಗಣಿಸುವುದಿಲ್ಲ.


ಆತನು ಅವರನ್ನು ಕಾರ್ಗತ್ತಲೆಯ ಸೆರೆಮನೆಗಳಿಂದ ಹೊರತಂದನು; ಕಟ್ಟಿದ ಹಗ್ಗಗಳನ್ನು ಕಿತ್ತುಹಾಕಿದನು.


ದೇವಜನರಲ್ಲಿ ಕೆಲವರು ಸೆರೆಯಾಳುಗಳಾಗಿದ್ದರು; ಕಾರ್ಗತ್ತಲೆಯ ಸೆರೆಮನೆಗಳಲ್ಲಿ ಬಂಧಿತರಾಗಿದ್ದರು.


ಯೆಹೋವನ ಸೇವಕನು ಹೇಳುವುದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.


ಹಿಂಸೆಗೆ ಗುರಿಯಾಗಿರುವವರಿಗೆ ನ್ಯಾಯವನ್ನೂ; ಹಸಿದವರಿಗೆ ಆಹಾರವನ್ನೂ ಕೊಡುವವನು ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುವನು.


ಪವಿತ್ರ ಗ್ರಂಥದಲ್ಲಿ ಹೀಗೆ ಬರೆದಿದೆ: “ಮಕ್ಕಳನ್ನು ಹೆತ್ತಿಲ್ಲದ ಬಂಜೆಯೇ, ಸಂತೋಷಪಡು. ಪ್ರಸವವೇದನೆಯಿಲ್ಲದವಳೇ, ಸ್ವರವೆತ್ತಿ ಕೂಗು. ಗಂಡನುಳ್ಳವಳಿಗಿಂತ ಗಂಡ ಬಿಟ್ಟವಳಿಗೆ ಮಕ್ಕಳು ಹೆಚ್ಚು.”


ಹಿಂದೆ ಆಹಾರವನ್ನು ಸಮೃದ್ಧಿಕರವಾಗಿ ಹೊಂದಿದ್ದವರು ಆಹಾರಕ್ಕಾಗಿ ದುಡಿಯಬೇಕಾಗುವುದು. ಹಿಂದೆ ಆಹಾರವಿಲ್ಲದೆ ಹಸಿದಿದ್ದವರಿಗೆ ಇಂದು ಆಹಾರ ಸಮೃದ್ಧಿಕರವಾಗಿರುವುದು! ಬಂಜೆಗೆ ಈಗ ಏಳು ಜನ ಮಕ್ಕಳಿರುವರು. ಆದರೆ ಹೆಚ್ಚು ಮಕ್ಕಳಿದ್ದ ತಾಯಿ ಇಂದು ವೇದನೆಗೊಂಡಿರುವಳು ಏಕೆಂದರೆ ಅವಳ ಮಕ್ಕಳೆಲ್ಲ ಸತ್ತುಹೋಗಿದ್ದಾರೆ.


ಇದ್ದಕ್ಕಿದ್ದಂತೆ ದೊಡ್ಡ ಭೂಕಂಪವಾಯಿತು. ಭೀಕರವಾಗಿದ್ದ ಅದು ಸೆರೆಮನೆಯ ಅಡಿಪಾಯವನ್ನೇ ನಡುಗಿಸಿತು. ಆಗ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದುಕೊಂಡವು. ಎಲ್ಲಾ ಕೈದಿಗಳ ಸರಪಣಿಗಳು ಕಳಚಿಬಿದ್ದವು.


ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು, ಯಾಕೆಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು.


ಏಸಾವನನ್ನು ನಾನು ಸ್ವೀಕರಿಸಲಿಲ್ಲ. ಏಸಾವನಿರುವ ಬೆಟ್ಟಪ್ರದೇಶವನ್ನು ನಾನು ಹಾಳುಮಾಡಿದೆನು. ಈಗ ಕಾಡುನಾಯಿಗಳು ಮಾತ್ರ ಅಲ್ಲಿ ವಾಸಿಸುತ್ತವೆ.” ಎಂದು ಹೇಳಿದನು.


ಆಕೆ ವ್ಯಭಿಚಾರ ಮಾಡುವದನ್ನು ನಿಲ್ಲಿಸದೆ ಹೋದರೆ ನಾನು ಆಕೆಯನ್ನು ಬೆತ್ತಲೆ ಮಾಡಿ, ಆಕೆ ಜನ್ಮ ತಾಳಿದಾಗ ಹೇಗೆ ಇದ್ದಳೋ ಹಾಗೆ ಮಾಡುವೆನು. ಆಕೆಯ ಜನರನ್ನು ಆಕೆಯಿಂದ ತೊಲಗಿಸಿ ಆಕೆಯನ್ನು ಒಣ ಮರುಭೂಮಿಯಂತೆ ಬೆಂಗಾಡಾಗಿ ಮಾಡುವೆನು. ಆಕೆ ಬಾಯಾರಿ ಸಾಯುವಂತೆ ಮಾಡುವೆನು.


ಅನಾಥಮಕ್ಕಳಿಗೂ ವಿಧವೆಯರಿಗೂ ಆತನು ಸಹಾಯಕನಾಗಿದ್ದಾನೆ. ನಮ್ಮ ದೇಶದಲ್ಲಿರುವ ಪರದೇಶಿಯರನ್ನೂ ಆತನು ಪ್ರೀತಿಸುತ್ತಾನೆ; ಅವರಿಗೆ ಊಟಬಟ್ಟೆಗಳನ್ನು ಒದಗಿಸುತ್ತಾನೆ.


ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ. ಅವುಗಳನ್ನು ನೋಡಿ ಕಾರ್ಯನಿರತನಾಗು. ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು. ಅನಾಥರಿಗೆ ಸಹಾಯ ಮಾಡುವವನು ನೀನೇ. ಆದ್ದರಿಂದ ಅವರಿಗೆ ಸಹಾಯಮಾಡು!


ಇಲ್ಲವಾದರೆ ಯೆಹೋವನು ನಿನಗೆ ವಿರೋಧವಾಗುವನು; ಯೆಹೋವನು ಬಲಿಷ್ಠನೂ ಅನಾಥರ ಪರವಾಗಿ ವಾದಿಸುವವನೂ ಆಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು