ಕೀರ್ತನೆಗಳು 68:9 - ಪರಿಶುದ್ದ ಬೈಬಲ್9 ದೇವರೇ, ನೀನು ಮಳೆ ಸುರಿಸಿ, ಒಣಗಿ ಕೃಶವಾಗಿದ್ದ ಭೂಮಿಯನ್ನು ಫಲವತ್ತು ಮಾಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದೇವರೇ, ನೀನು ಹೇರಳವಾಗಿ ಮಳೆಸುರಿಸಿ, ಬಾಯ್ದೆರೆದಿದ್ದ ನಿನ್ನ ಸ್ವತ್ತನ್ನು ಶಾಂತಪಡಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದೇವಾ, ಹೇರಳವಾಗಿ ನೀ ಸುರಿಮಳೆಗರೆದೆ I ಬತ್ತಿದ ನಿನ್ನ ಸೊತ್ತನ್ನು ಸಮೃದ್ಧಿಗೊಳಿಸಿದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದೇವರೇ, ನೀನು ಹೇರಳ ಮಳೆಸುರಿಸಿ ಬಾಯ್ದೆರೆದಿದ್ದ ನಿನ್ನ ಸ್ವಾಸ್ತ್ಯವನ್ನು ಶಾಂತಿಪಡಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದೇವರೇ, ನೀವು ಹೇರಳವಾಗಿ ಮಳೆಯನ್ನು ಸುರಿಸಿ, ದಣಿದ ನಿಮ್ಮ ಬಾಧ್ಯತೆಯನ್ನು ನೀವು ಉತ್ಸಾಹಪಡಿಸಿದಿರಿ. ಅಧ್ಯಾಯವನ್ನು ನೋಡಿ |
ಆಗ ಯೆಹೋವನು ಎಲೀಯನಿಗೆ, “ಹೋಗು, ನನ್ನ ಎದುರಿಗೆ ಬೆಟ್ಟದ ಮೇಲೆ ನಿಲ್ಲು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುತ್ತೇನೆ” ಎಂದು ಹೇಳಿದನು. ಆಗ ಬಿರುಗಾಳಿಯು ಬೀಸಿತು. ಆ ಬಿರುಗಾಳಿಯು ಬೆಟ್ಟಗಳನ್ನು ಸೀಳಿಹಾಕಿತು; ಅದು ದೊಡ್ಡ ಬಂಡೆಗಳನ್ನು ಯೆಹೋವನ ಎದುರಿನಲ್ಲಿ ಒಡೆದುಹಾಕಿತು. ಆದರೆ ಆ ಗಾಳಿಯೇ ಯೆಹೋವನಲ್ಲ! ಆ ಬಿರುಗಾಳಿಯ ನಂತರ ಅಲ್ಲಿ ಒಂದು ಭೂಕಂಪವುಂಟಾಯಿತು. ಆದರೆ ಆ ಭೂಕಂಪವು ಯೆಹೋವನಲ್ಲ.