Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:11 - ಪರಿಶುದ್ದ ಬೈಬಲ್‌

11 ನಾನು ಶೋಕವಸ್ತ್ರವನ್ನು ಧರಿಸಿಕೊಂಡದ್ದು ಗಾದೆಯ ಮಾತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಗೋಣಿತಟ್ಟು ಕಟ್ಟಿಕೊಂಡದ್ದು, ಅವರ ಗಾದೆಗೆ ಆಸ್ಪದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಗೋಣಿತಟ್ಟನು ನಾನುಟ್ಟುಕೊಂಡೆನಯ್ಯಾ I ಅಣಕ ಅವಹೇಳನಕೆ ಗುರಿಯಾದೆನಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ಗೋಣೀತಟ್ಟು ಕಟ್ಟಿಕೊಂಡದ್ದು ಅವರ ಗಾದೆಗೆ ಆಸ್ಪದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಗೋಣಿತಟ್ಟನ್ನು ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ. ಇದರಿಂದ ನಾನು ಅವರಿಗೆ ಗಾದೆಯ ಮಾತಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:11
11 ತಿಳಿವುಗಳ ಹೋಲಿಕೆ  

ನಾನು ಆ ಜನರನ್ನು ದಂಡಿಸುವೆನು. ಆ ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನ್ನು ಉಂಟು ಮಾಡುವುದು. ಜನರು ಯೆಹೂದದ ಜನರನ್ನು ಗೇಲಿಮಾಡುವರು. ನಾನು ಅವರನ್ನು ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಬಗ್ಗೆ ಪರಿಹಾಸ್ಯದ ಮಾತುಗಳನ್ನು ಆಡುವರು; ಅವರನ್ನು ಶಪಿಸುವರು.


ದೇವರು ನನ್ನ ಹೆಸರನ್ನು ಪ್ರತಿಯೊಬ್ಬರಿಗೂ ಕೆಟ್ಟಪದವನ್ನಾಗಿ ಮಾಡಿದ್ದಾನೆ. ಜನರು ನನ್ನ ಮುಖಕ್ಕೆ ಉಗುಳುತ್ತಿದ್ದಾರೆ.


ಯಾಜಕರೇ, ನೀವು ನಿಮ್ಮ ಶೋಕವಸ್ತ್ರವನ್ನು ಧರಿಸಿ ಗಟ್ಟಿಯಾಗಿ ರೋಧಿಸಿರಿ. ವೇದಿಕೆಯಲ್ಲಿ ಸೇವೆಮಾಡುವವರೇ, ಗಟ್ಟಿಯಾಗಿ ರೋಧಿಸಿರಿ. ನನ್ನ ದೇವರ ಸೇವಕರೇ, ನೀವು ನಿಮ್ಮ ಶೋಕವಸ್ತ್ರಗಳಲ್ಲಿಯೇ ನಿದ್ರೆಮಾಡಿರಿ. ಯಾಕೆಂದರೆ ಇನ್ನು ದೇವಾಲಯದಲ್ಲಿ ಧಾನ್ಯ ಮತ್ತು ಪಾನಸಮರ್ಪಣೆ ಇಲ್ಲ.


ಮದುಮಗನು ಸತ್ತುಹೋದಾಗ ಮದುಮಗಳು ಗೋಳಾಡುವಂತೆ ನೀವು ಗೋಳಾಡಿರಿ.


ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಜನರಿಗೆ, ಅವರ ಸತ್ತುಹೋದ ಸ್ನೇಹಿತರಿಗೋಸ್ಕರ ರೋಧಿಸಿ ದುಃಖಿಸಿರಿ ಎಂದು ಹೇಳುವನು. ಜನರು ತಮ್ಮ ತಲೆಗಳನ್ನು ಬೋಳಿಸಿ ಶೋಕವಸ್ತ್ರಗಳನ್ನು ಧರಿಸುವರು.


ಆ ಸಮಯದಲ್ಲಿ ಆಮೋಚನ ಮಗನಾದ ಯೆಶಾಯನೊಂದಿಗೆ ಯೆಹೋವನು ಮಾತನಾಡಿದನು. “ನಿನ್ನ ಶೋಕವಸ್ತ್ರಗಳನ್ನು ತೆಗೆದುಹಾಕು. ನಿನ್ನ ಕಾಲುಗಳಿಂದ ಪಾದರಕ್ಷೆಗಳನ್ನು ತೆಗೆದುಬಿಡು” ಎಂದು ಯೆಹೋವನು ಹೇಳಿದಾಗ ಯೆಶಾಯನು ಆತನಿಗೆ ವಿಧೇಯನಾದನು. ಯೆಶಾಯನು ಪಾದರಕ್ಷೆಗಳಿಲ್ಲದೆ, ಬಟ್ಟೆಗಳಿಲ್ಲದೆ ಅಡ್ಡಾಡಿದನು.


ನೀವು ಯಾವ ದೇಶಕ್ಕೆ ಕಳುಹಿಸಲ್ಪಡುವಿರೋ ಆ ದೇಶದವರು ನಿಮ್ಮ ದುರವಸ್ಥೆಯನ್ನು ನೋಡಿ ನಗುವರು; ಕೆಟ್ಟಮಾತುಗಳನ್ನಾಡುವರು.


ಹಸಿವೆಯಿಂದ ನನ್ನ ಮೊಣಕಾಲುಗಳು ಬಲಹೀನವಾಗಿವೆ. ನನ್ನ ತೂಕ ಕಡಿಮೆಯಾಗುತ್ತಿದೆ; ನಾನು ತೆಳ್ಳಗಾಗುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು