ಕೀರ್ತನೆಗಳು 69:13 - ಪರಿಶುದ್ದ ಬೈಬಲ್13 ಯೆಹೋವನೇ, ನಾನಾದರೋ, ನಿನಗೆ ಮೊರೆಯಿಟ್ಟಿದ್ದೇನೆ; ನಿನ್ನ ಕೃಪೆಗೆ ತಕ್ಕಕಾಲ ಇದೇ. ದೇವರೇ, ನಿನ್ನ ಮಹಾಪ್ರೀತಿಯಿಂದಲೂ ನಿಶ್ಚಿತವಾದ ರಕ್ಷಣೆಯಿಂದಲೂ ನನಗೆ ಉತ್ತರಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯವಂತನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಪ್ರಸನ್ನಕಾಲದಲ್ಲಿ ಪ್ರಭು, ನಾ ಮೊರೆಯಿಡುತ್ತಿರುವೆ ನಿನಗೆ I ಪ್ರೀತಿಮಯ ದೇವಾ, ಜೀವೋದ್ಧಾರಕ, ಸದುತ್ತರ ನೀಡೆನಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯಸಂಧನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರೇ, ನಾನಾದರೋ ನಿಮಗೆ ಮೊರೆಯಿಟ್ಟಿದ್ದೇನೆ. ಇದು ನಿಮ್ಮ ಮೆಚ್ಚಿಕೆಯ ಸಕಾಲ. ಓ ದೇವರೇ, ನಿಮ್ಮ ಮಹಾಪ್ರೀತಿಯಿಂದ ನನಗೆ ನಿಮ್ಮ ನಿಶ್ಚಯ ರಕ್ಷಣೆಯನ್ನು ದಯಪಾಲಿಸಿರಿ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.