ಕೀರ್ತನೆಗಳು 69:20 - ಪರಿಶುದ್ದ ಬೈಬಲ್20 ಅವಮಾನವು ನನ್ನನ್ನು ಜಜ್ಜಿಹಾಕಿದೆ! ನಾನು ನಾಚಿಕೆಯಿಂದ ಸಾಯುವಂತಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ, ಆದರೆ ಯಾರೂ ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ, ಆದರೆ ಯಾರೂ ಸಿಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಿಂದೆಯಿಂದ ಮನನೊಂದು ಹತಾಶನಾಗಿರುವೆನಯ್ಯಾ I ಹಾತೊರೆದರೂ ದಯೆತೋರುವನಾರೂ ಸಿಗಲಿಲ್ಲ I ಅರಸಿದರೂ ಸಾಂತ್ವನನೀಡುವವನು ದೊರಕಲಿಲ್ಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಿಂದೆಯಿಂದ ಖಿನ್ನನಾಗಿ ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಿಂದೆಯು ನನ್ನ ಹೃದಯವನ್ನು ಮುರಿದಿದೆ. ನನ್ನನ್ನು ನಿಸ್ಸಹಾಯಕನನ್ನಾಗಿ ಮಾಡಿದೆ. ಅನುತಾಪಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಇರಲಿಲ್ಲ. ಸಂತೈಸುವವರಿಗೋಸ್ಕರ ಸಹ ಎದುರು ನೋಡಿದೆನು, ಆದರೆ ಯಾರೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿ |