Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:23 - ಪರಿಶುದ್ದ ಬೈಬಲ್‌

23 ಅವರು ಕುರುಡರಾಗಲಿ; ಅವರ ಬೆನ್ನುಗಳು ಗೂನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರ ಕಣ್ಣು ಮೊಬ್ಬಾಗಿ ಕಾಣದೆ ಹೋಗಲಿ; ಅವರ ನಡುವು ಯಾವಾಗಲೂ ನಡಗುತ್ತಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರ ಕಣ್ಣು ಮಬ್ಬಾಗಿ ಕಾಣದೆಹೋಗಲಿ I ಅವರ ಸೊಂಟ ಬಿಡುವಿಲ್ಲದೆ ನಡುಗುತ್ತಿರಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರ ಕಣ್ಣು ಮೊಬ್ಬಾಗಿ ಕಾಣದೆಹೋಗಲಿ; ಅವರ ನಡುವು ಯಾವಾಗಲೂ ಬಳುಕುತ್ತಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರ ಕಣ್ಣುಗಳು ಕಾಣದ ಹಾಗೆ ಕತ್ತಲಾಗಲಿ. ಮತ್ತು ಅವರ ಬೆನ್ನು ಎಂದೆಂದಿಗೂ ಬಗ್ಗಿ ಹೋಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:23
12 ತಿಳಿವುಗಳ ಹೋಲಿಕೆ  

ರಾಜನಾದ ಬೇಲ್ಶಚ್ಚರನು ಬಹಳ ಹೆದರಿದನು. ಭಯದಿಂದ ಅವನ ಮುಖವು ಕಳೆಗುಂದಿತು; ಮತ್ತು ಅವನ ಮೊಣಕಾಲುಗಳು ನಡುಗಿ ಒಂದಕ್ಕೊಂದು ಬಡಿಯುತ್ತಿದ್ದವು. ಅವನ ಕಾಲುಗಳು ತುಂಬ ಬಲಹೀನವಾಗಿ ಅವನಿಗೆ ನಿಲ್ಲಲಾಗಲಿಲ್ಲ.


ಅವರ ಕಣ್ಣು ಕುರುಡಾಗಲಿ; ನಿರಂತರ ಭಾರದಿಂದ ಬೆನ್ನು ಗೂನಾಗಲಿ.”


“ಈ ಪ್ರಶ್ನೆಯನ್ನು ಕೇಳಿ ಪರಿಶೀಲಿಸಿರಿ. ಪುರುಷನು ಮಗುವಿಗೆ ಜನ್ಮಕೊಡಬಲ್ಲನೆ? ಖಂಡಿತವಾಗಿಯೂ ಇಲ್ಲ. ಹಾಗಾದರೆ ಪ್ರತಿಯೊಬ್ಬ ಬಲಿಷ್ಠನೂ ಪ್ರಸವವೇದನೆಪಡುತ್ತಿರುವ ಸ್ತ್ರೀಯಂತೆ ತನ್ನ ಹೊಟ್ಟೆಯನ್ನು ಏಕೆ ಹಿಡಿದುಕೊಂಡಿದ್ದಾನೆ? ಪ್ರತಿಯೊಬ್ಬನ ಮುಖವು ಸತ್ತವನ ಮುಖದಂತೆ ಏಕೆ ಬಿಳಿಚಿದೆ? ಏಕೆಂದರೆ ಜನರು ಬಹಳ ಭಯಪಟ್ಟಿದ್ದಾರೆ.


ಆದರೆ ಅವರ ಬುದ್ಧಿಗೆ ಮಂಕು ಕವಿದಿದ್ದರಿಂದ ಅವರು ಅರ್ಥಮಾಡಿಕೊಳ್ಳಲಾಗಲಿಲ್ಲ. ಅವರು ಹಳೆ ಒಡಂಬಡಿಕೆಯನ್ನು ಓದುವಾಗ ಇಂದಿಗೂ ಅದೇ ಮುಸುಕು ಅರ್ಥವನ್ನು ಮರೆಮಾಡುತ್ತದೆ. ಆ ಮುಸುಕನ್ನು ತೆಗೆದು ಹಾಕಲಿಲ್ಲ. ಏಕೆಂದರೆ ಕ್ರಿಸ್ತನ ಮೂಲಕವಾಗಿ ಮಾತ್ರ ಅದು ತೆಗೆದುಹಾಕಲ್ಪಡುತ್ತದೆ.


ಸಹೋದರ ಸಹೋದರಿಯರೇ, ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳದಂತೆ ಇದುವರೆಗೆ ರಹಸ್ಯವಾಗಿದ್ದ ಸತ್ಯವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ: ಇಸ್ರೇಲಿನ ಜನರಲ್ಲಿ ಒಂದು ಪಾಲು ಮಂದಿ ಮೊಂಡರಾದರು. ಆದರೆ ಯೆಹೂದ್ಯರಲ್ಲದ ಜನರೆಲ್ಲರೂ ದೇವರ ಬಳಿಗೆ ಬಂದಾಗ ಅವರ ಮೊಂಡತನವು ಇಲ್ಲವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು