ಕೀರ್ತನೆಗಳು 69:3 - ಪರಿಶುದ್ದ ಬೈಬಲ್3 ಸಹಾಯಕ್ಕಾಗಿ ಕೂಗಿಕೂಗಿ ಬಲಹೀನನಾಗಿರುವೆ. ನನ್ನ ಗಂಟಲು ನೋಯುತ್ತಿದೆ. ನಿನ್ನ ಸಹಾಯಕ್ಕಾಗಿ ಎದುರುನೋಡುತ್ತಾ ನನ್ನ ಕಣ್ಣುಗಳು ನೋಯುತ್ತಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕಾಯ್ದು ಕಾಯ್ದು ಕಣ್ಣು ಗುಳಿಬಿದ್ದಿದೆ ದೇವಾ, ನಿನಗಾಗಿ I ಗಂಟಲು ಒಣಗಿದೆ, ಜೀವ ಸೊರಗಿದೆ, ನಿನ್ನ ಕೂಗಿ ಕೂಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮೊರೆಯಿಟ್ಟಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ದೃಷ್ಟಿ ಮಂದವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾನು ಮೊರೆಯಿಟ್ಟು ದಣಿದಿದ್ದೇನೆ. ನನ್ನ ಗಂಟಲು ಒಣಗಿದೆ. ನಾನು ದೇವರನ್ನು ಎದುರು ನೋಡುವುದರಿಂದ ನನ್ನ ಕಣ್ಣು ಕ್ಷೀಣವಾಗಿವೆ. ಅಧ್ಯಾಯವನ್ನು ನೋಡಿ |
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.