ಕೀರ್ತನೆಗಳು 69:8 - ಪರಿಶುದ್ದ ಬೈಬಲ್8 ನನ್ನ ಸಹೋದರರು ನನ್ನನ್ನು ಅಪರಿಚಿತನಂತೆ ಕಾಣುತ್ತಾರೆ. ನನ್ನ ತಾಯಿಯ ಪುತ್ರರು ನನ್ನನ್ನು ಪರಕೀಯನಂತೆ ಕಾಣುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನನ್ನ ಅಣ್ಣತಮ್ಮಂದಿರಿಗೆ ಅಪರಿಚಿತನಂತಾದೆನು; ಒಡಹುಟ್ಟಿದವರಿಗೆ ಪರದೇಶಿಯಂತೆ ಇದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನನ್ನವರಿಗೇ ನಾನನ್ಯನಾದೆನಯ್ಯಾ I ಒಡ ಹುಟ್ಟಿದವರಿಗೇ ಹೊರಗಿನವನಾದೆನಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನ್ನ ಅಣ್ಣತಮ್ಮಂದಿರಿಗೆ ಹೆರನಂತಾದೆನು; ಒಡಹುಟ್ಟಿದವರಿಗೆ ಪರಕೀಯನಂತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ. ನನ್ನ ಒಡಹುಟ್ಟಿದವರಿಗೇ ಪರಕೀಯನಾಗಿದ್ದೇನೆ. ಅಧ್ಯಾಯವನ್ನು ನೋಡಿ |
ದಾವೀದನು ಸೈನಿಕರೊಡನೆ ಮಾತಾಡುತ್ತಿರುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿಸಿಕೊಂಡನು. ಎಲೀಯಾಬನು ದಾವೀದನ ಮೇಲೆ ಕೋಪಗೊಂಡು ಅವನಿಗೆ, “ನೀನು ಇಲ್ಲಿಗೆ ಬಂದದ್ದೇಕೆ? ಅಲ್ಲಿದ್ದ ಕೆಲವು ಕುರಿಗಳನ್ನು ಯಾರ ಬಳಿ ಬಿಟ್ಟಿರುವೆ? ನೀನು ಇಲ್ಲಿಗೆ ಏಕೆ ಬಂದಿರುವೆಯೆಂಬುದು ನನಗೆ ಗೊತ್ತು. ನಿನಗೆ ಹೇಳಿದ್ದನ್ನು ನೀನು ಮಾಡುವುದಿಲ್ಲ. ನೀನು ಕೇವಲ ಯುದ್ಧವನ್ನು ನೋಡುವುದಕ್ಕಾಗಿಯೇ ಇಲ್ಲಿಗೆ ಬಂದಿರುವೆ” ಎಂದು ಗದರಿಸಿದನು.
ಯೆಹೋವನೇ, ನನ್ನ ವಿಷಯ ನಿನಗೆ ಗೊತ್ತು. ನನ್ನನ್ನು ಜ್ಞಾಪಕದಲ್ಲಿಟ್ಟುಕೊಂಡು ರಕ್ಷಿಸು. ಜನರು ನನ್ನನ್ನು ತೊಂದರೆಗೀಡು ಮಾಡುತ್ತಿದ್ದಾರೆ. ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು. ನೀನು ಅವರೊಂದಿಗೆ ಬಹಳ ತಾಳ್ಮೆಯಿಂದ ವರ್ತಿಸುತ್ತಿರುವೆ. ಅವರೊಂದಿಗೆ ತಾಳ್ಮೆಯಿಂದ ಇದ್ದು ನನ್ನನ್ನು ಹಾಳುಮಾಡಬೇಡ. ನನ್ನ ಬಗ್ಗೆ ವಿಚಾರ ಮಾಡು. ಯೆಹೋವನೇ, ನಿನಗಾಗಿ ನಾನು ಎಷ್ಟು ಕಷ್ಟಪಡುತ್ತಿದ್ದೇನೆ ಎಂಬುದನ್ನು ಯೋಚಿಸು.