ಕೀರ್ತನೆಗಳು 69:9 - ಪರಿಶುದ್ದ ಬೈಬಲ್9 ನಿನ್ನ ಆಲಯಾಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತಿದೆ. ನಿನ್ನನ್ನು ಗೇಲಿಮಾಡುವ ಜನರಿಂದ ನನಗೆ ಅಪಮಾನವಾಗುತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿನ್ನ ಆಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅಗ್ನಿಯಂತೆನ್ನ ದಹಿಸುತ್ತಿದೆ ನಿನ್ನಾಲಯದಭಿಮಾನ I ಎನ್ನ ಮೇಲೆರಗಿದೆ ನಿನ್ನ ಕಡುದ್ರೋಹಿಗಳ ದೂಷಣ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಿನ್ನ ಆಲಯಾಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಏಕೆಂದರೆ ನಿಮ್ಮ ಆಲಯದ ಮೇಲಿನ ಆಸಕ್ತಿಯು ಬೆಂಕಿಯಂತೆ ನನ್ನನ್ನು ದಹಿಸಿಬಿಟ್ಟಿದೆ. ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ. ಅಧ್ಯಾಯವನ್ನು ನೋಡಿ |
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.