ಕೀರ್ತನೆಗಳು 7:1 - ಪರಿಶುದ್ದ ಬೈಬಲ್1 ನನ್ನ ದೇವರಾದ ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿರುವೆ. ನನ್ನನ್ನು ಹಿಂದಟ್ಟುತ್ತಿರುವವರಿಂದ ನನ್ನನ್ನು ತಪ್ಪಿಸಿ ಕಾಪಾಡು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನೇ, ನನ್ನ ದೇವರೇ, ನಿನ್ನ ಮೊರೆಹೊಕ್ಕಿದ್ದೇನೆ; ಬೆನ್ನಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಿನ್ನಾಶ್ರಯವನರಸಿ ಹೇ ಸ್ವಾಮಿ ದೇವಾ, ನಾ ಬಂದಿಹೆನು I ಬೆನ್ನಟ್ಟಿ ಬರುವವರ ಕೈಯಿಂದ ತಪ್ಪಿಸಿ, ಕಾಪಾಡೆನ್ನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನೇ, ನನ್ನ ದೇವರೇ, ನಿನ್ನ ಮರೆಹೊಕ್ಕಿದ್ದೇನೆ; ಹಿಂದಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನನ್ನ ಯೆಹೋವ ದೇವರೇ, ನಿಮ್ಮನ್ನೇ ಆಶ್ರಯಿಸಿದ್ದೇನೆ; ನನ್ನನ್ನು ಬೆನ್ನಟ್ಟಿದ ಎಲ್ಲರಿಂದಲೂ ನನ್ನನ್ನು ರಕ್ಷಿಸಿ ಕಾಪಾಡಿರಿ, ಅಧ್ಯಾಯವನ್ನು ನೋಡಿ |
“ಎಫ್ರಾಯೀಮ್ ಅಳುವುದನ್ನು ನಾನು ಕೇಳಿದ್ದೇನೆ. ಎಫ್ರಾಯೀಮು ಹೀಗೆ ಹೇಳುವದನ್ನು ನಾನು ಕೇಳಿದ್ದೇನೆ. ‘ಯೆಹೋವನೇ, ನೀನು ನಿಜವಾಗಿ ನನ್ನನ್ನು ದಂಡಿಸಿದೆ. ನಾನು ಪಾಠವನ್ನು ಕಲಿತೆನು. ನಾನು ತರಬೇತಿ ಹೊಂದದ ಒಂದು ಹೋರಿಯುಂತಿದ್ದೆನು. ನನ್ನನ್ನು ದಂಡಿಸುವದನ್ನು ದಯವಿಟ್ಟು ನಿಲ್ಲಿಸು. ನಾನು ನಿನ್ನಲ್ಲಿಗೆ ಹಿಂದಿರುಗಿ ಬರುತ್ತೇನೆ. ನಿಜವಾಗಿಯೂ ನೀನೇ ನನ್ನ ದೇವರಾದ ಯೆಹೋವನು.
ಯೆಹೋವನೇ, ನನ್ನ ವಿಷಯ ನಿನಗೆ ಗೊತ್ತು. ನನ್ನನ್ನು ಜ್ಞಾಪಕದಲ್ಲಿಟ್ಟುಕೊಂಡು ರಕ್ಷಿಸು. ಜನರು ನನ್ನನ್ನು ತೊಂದರೆಗೀಡು ಮಾಡುತ್ತಿದ್ದಾರೆ. ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು. ನೀನು ಅವರೊಂದಿಗೆ ಬಹಳ ತಾಳ್ಮೆಯಿಂದ ವರ್ತಿಸುತ್ತಿರುವೆ. ಅವರೊಂದಿಗೆ ತಾಳ್ಮೆಯಿಂದ ಇದ್ದು ನನ್ನನ್ನು ಹಾಳುಮಾಡಬೇಡ. ನನ್ನ ಬಗ್ಗೆ ವಿಚಾರ ಮಾಡು. ಯೆಹೋವನೇ, ನಿನಗಾಗಿ ನಾನು ಎಷ್ಟು ಕಷ್ಟಪಡುತ್ತಿದ್ದೇನೆ ಎಂಬುದನ್ನು ಯೋಚಿಸು.