ಕೀರ್ತನೆಗಳು 7:12 - ಪರಿಶುದ್ದ ಬೈಬಲ್12 ಆತನು ತಾನು ಮಾಡಿದ ತೀರ್ಮಾನವನ್ನು ಬದಲಾಯಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ತೀಡುವನು ಕತ್ತಿಯನು, ಹೂಡುವನು ಬಾಣವನು I ಪಡೆಯದಿರೆ ದುರುಳನು ಮನಪರಿವರ್ತನೆಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ದೋಷಿಯು ಮನಸ್ಸನ್ನು ಬೇರೆಮಾಡಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬೊಗ್ಗಿಸಿ ಸಿದ್ಧಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅಂಥವರು ತಿರುಗಿಕೊಳ್ಳದಿದ್ದರೆ ದೇವರು ತಮ್ಮ ಖಡ್ಗ ಮಸೆಯುವರು; ತಮ್ಮ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡುವರು. ಅಧ್ಯಾಯವನ್ನು ನೋಡಿ |
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’