ಕೀರ್ತನೆಗಳು 7:17 - ಪರಿಶುದ್ದ ಬೈಬಲ್17 ಯೆಹೋವನ ನ್ಯಾಯವಾದ ತೀರ್ಪಿಗಾಗಿ ಆತನನ್ನು ಕೊಂಡಾಡುವೆನು. ಮಹೋನ್ನತನಾದ ಯೆಹೋವನ ಹೆಸರನ್ನು ಸ್ತುತಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸತ್ಯಸ್ವರೂಪನಾದ ಸ್ವಾಮಿಗೆ ನನ್ನ ವಂದನೆ I ಪರಾತ್ಪರ ಪ್ರಭುವಿನ ನಾಮಕ್ಕೆ ಸ್ತುತಿಸಂಕೀರ್ತನೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ ನಾನು ಆತನನ್ನು ಕೊಂಡಾಡುವೆನು. ಪರಾತ್ಪರದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಾನು ಯೆಹೋವ ದೇವರನ್ನು ಕೊಂಡಾಡುವೆನು; ಏಕೆಂದರೆ, ಅವರು ನೀತಿಯುಳ್ಳವರು. ಮಹೋನ್ನತರಾದ ಯೆಹೋವ ದೇವರ ಹೆಸರನ್ನು ಕೀರ್ತನೆ ಮಾಡುವೆನು. ಅಧ್ಯಾಯವನ್ನು ನೋಡಿ |
ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.
ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ, ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.