ಕೀರ್ತನೆಗಳು 7:2 - ಪರಿಶುದ್ದ ಬೈಬಲ್2 ನೀನು ನನಗೆ ಸಹಾಯ ಮಾಡದಿದ್ದರೆ, ಸಿಂಹದ ಬಾಯಿಗೆ ಸಿಕ್ಕಿಕೊಂಡಿರುವ ಪ್ರಾಣಿಯಂತಾಗುವೆನು; ರಕ್ಷಣೆಯೇ ಇಲ್ಲದವನಾಗಿ ಸೀಳಿಹಾಕಲ್ಪಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು, ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇಲ್ಲದಿರೆ ಶತ್ರು ತಿಳಿದಾನು ನನಗೆ ರಕ್ಷಕನಿಲ್ಲವೆಂದು I ಝಲ್ಲನೆ ಸೀಳಿಬಿಟ್ಟಾನು ಸಿಂಹದಂತೆ ಮೇಲೆಬಿದ್ದು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇಲ್ಲದಿದ್ದರೆ, ನನ್ನನ್ನು ಸಿಂಹದಂತೆ ಅವರು ಹರಿದುಬಿಡುವರು ರಕ್ಷಿಸಲು ಯಾರೂ ಇಲ್ಲವೆಂದು ನನ್ನನ್ನು ನಾಶಮಾಡಿಬಿಡುವರು. ಅಧ್ಯಾಯವನ್ನು ನೋಡಿ |
ಲಯಿಷಿನಲ್ಲಿ ವಾಸಮಾಡುತ್ತಿದ್ದ ಜನರನ್ನು ರಕ್ಷಿಸುವವರು ಯಾರೂ ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹುದೂರದಲ್ಲಿದ್ದ ಕಾರಣ ಅವರೂ ಬರುವಂತಿರಲಿಲ್ಲ. ಲಯಿಷಿನವರು ಆರಾಮಿನ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಂಡಿರಲಿಲ್ಲ. ಹೀಗಾಗಿ ಅವರೂ ಸಹಾಯಕ್ಕೆ ಬರಲಿಲ್ಲ. ಬೇತ್‌ರೆಹೋಬಿನ ಕಣಿವೆಯಲ್ಲಿದ್ದ ಈ ನಗರವನ್ನು ದಾನ್ಯರು ಹೊಸದಾಗಿ ಕಟ್ಟಿದರು. ಆ ನಗರವು ಅವರ ವಾಸಸ್ಥಾನವಾಯಿತು.