ಕೀರ್ತನೆಗಳು 7:5 - ಪರಿಶುದ್ದ ಬೈಬಲ್5 ಇವುಗಳಲ್ಲಿ ನಾನು ಯಾವುದನ್ನೇ ಮಾಡಿದ್ದರೂ, ಶತ್ರುವು ನನ್ನನ್ನು ಹಿಂದಟ್ಟಿ ಬಂದು ನನ್ನನ್ನು ಹಿಡಿದು ನೆಲಕ್ಕೆ ಕೆಡವಿ ತುಳಿಯಲಿ; ನನ್ನ ಪ್ರಾಣವನ್ನು ಮಣ್ಣುಪಾಲು ಮಾಡಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; ನಿಷ್ಕಾರಣ ವೈರಿಯನ್ನು ರಕ್ಷಿಸಿದೆನಲ್ಲ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಎನ್ನ ಬೆನ್ನಟ್ಟಿ ಬರಲಿ ವೈರಿ, ಕಾಲಿಂದೆನ್ನ ಮೆಟ್ಟಿ ತುಳಿಯಲಿ I ಎನ್ನ ಮಾನವನು ಮಣ್ಣುಪಾಲಾಗಿಸಲಿ, ನನ್ನನು ಸೋಲಿಸಿಬಿಡಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; ನಿಷ್ಕಾರಣವೈರಿಯನ್ನೂ ರಕ್ಷಿಸಿದೆನಲ್ಲಾ. ಸೆಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ನನ್ನ ವೈರಿಯು ಬೆನ್ನಟ್ಟಿ ನನ್ನನ್ನು ಹಿಡಿದುಕೊಳ್ಳಲಿ. ನನ್ನ ಜೀವವನ್ನು ನೆಲಕ್ಕೆ ಹಾಕಿ ತುಳಿದು ಬಿಡಲಿ ಮತ್ತು ನನ್ನ ಮಾನವನ್ನು ಮಣ್ಣು ಪಾಲಾಗುವಂತೆ ಮಾಡಲಿ. ಅಧ್ಯಾಯವನ್ನು ನೋಡಿ |
ನನ್ನ ತಂದೆಯೇ, ನನ್ನ ಕೈಯಲ್ಲಿರುವ ಚೂರು ಬಟ್ಟೆಯನ್ನು ನೋಡು. ನಾನು ನಿನ್ನ ಅಂಗಿಯ ಮೂಲೆಯನ್ನು ಕತ್ತರಿಸಿಹಾಕಿದೆ. ನಾನು ನಿನ್ನನ್ನು ಕೊಲ್ಲಬಹುದಿತ್ತು, ಆದರೆ ಕೊಲ್ಲಲಿಲ್ಲ! ನೀನು ಇದನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸಿದ್ದೇನೆ. ನಾನು ನಿನ್ನ ವಿರುದ್ಧವಾಗಿ ಯಾವ ಸಂಚನ್ನೂ ಮಾಡುತ್ತಿಲ್ಲವೆಂದು ನೀನು ತಿಳಿದುಕೊಳ್ಳಬೇಕಾಗಿದೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ಆದರೆ ನೀನು ನನ್ನನ್ನು ಹುಡುಕುತ್ತಿರುವೆ; ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವೆ.