ಕೀರ್ತನೆಗಳು 7:8 - ಪರಿಶುದ್ದ ಬೈಬಲ್8 ಜನರಿಗೆ ನ್ಯಾಯತೀರಿಸು. ಯೆಹೋವನೇ, ನನಗೆ ನ್ಯಾಯತೀರಿಸು. ನನ್ನನ್ನು ನೀತಿವಂತನೆಂದೂ ನಿರಪರಾಧಿಯೆಂದೂ ನಿರೂಪಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹೇ ಪ್ರಭು, ಜಗದ ಜನಾಂಗಕೆ ನ್ಯಾಯ ದೊರಕಿಸುವವನು ನೀನು I ನನಗೂ ನ್ಯಾಯ ದೊರಕಿಸು : ನಿರಪರಾಧಿ, ನೀತಿವಂತ ನಾನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನು ಎಲ್ಲಾ ಜನಾಂಗಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ಜನಗಳಿಗೆ ನ್ಯಾಯತೀರಿಸಲಿ. ಮಹೋನ್ನತರಾದ ಯೆಹೋವ ದೇವರೇ, ನನ್ನ ನೀತಿಯ ಪ್ರಕಾರವೂ, ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸಿರಿ. ಅಧ್ಯಾಯವನ್ನು ನೋಡಿ |
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.