ಕೀರ್ತನೆಗಳು 70:4 - ಪರಿಶುದ್ದ ಬೈಬಲ್4 ನನ್ನ ಆರಾಧಕರೆಲ್ಲರೂ ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ. ನಿನ್ನ ರಕ್ಷಣೆಯಲ್ಲಿ ಆನಂದಿಸುವವರು ನಿನ್ನನ್ನು ಯಾವಾಗಲೂ ಕೊಂಡಾಡಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿನ್ನ ದರ್ಶನಾರ್ಥಿಗಳು ಹರ್ಷಿಸಲಿ, ನಿನ್ನಲಿ ನಲಿದು ಆನಂದಿಸಲಿ I ನಿನ್ನ ಉದ್ಧಾರಕ ಶಕ್ತಿ ಪ್ರಿಯರು ಸತತ “ದೇವನಿಗೆ ಉಘೇ” ಎನ್ನಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು - ದೇವರಿಗೆ ಸ್ತೋತ್ರವೆಂದು ಯಾವಾಗಲೂ ಅನ್ನುವವರಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ, ನಿಮ್ಮನ್ನು ಹುಡುಕುವವರೆಲ್ಲರೂ ನಿಮ್ಮಲ್ಲಿ ಹರ್ಷಾನಂದಗೊಳ್ಳಲಿ. ನಿಮ್ಮ ರಕ್ಷಣೆಯನ್ನು ಪ್ರೀತಿಸುವವರು, “ದೇವರು ಮಹೋನ್ನತರು,” ಎಂದು ಯಾವಾಗಲೂ ಹೇಳಲಿ. ಅಧ್ಯಾಯವನ್ನು ನೋಡಿ |
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.