ಕೀರ್ತನೆಗಳು 70:5 - ಪರಿಶುದ್ದ ಬೈಬಲ್5 ನಾನಾದರೋ ಬಡವನೂ ನಿಸ್ಸಹಾಯಕನೂ ಆಗಿರುವೆ! ದೇವರೇ, ಬೇಗನೆ ಬಂದು ನನ್ನನ್ನು ರಕ್ಷಿಸು! ಯೆಹೋವನೇ, ನನ್ನನ್ನು ಬಿಡುಗಡೆ ಮಾಡಬಲ್ಲವನು ನೀನೊಬ್ಬನೇ. ಯೆಹೋವನೇ ತಡಮಾಡಬೇಡ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ದೇವರೇ, ಬೇಗನೆ ಬಾ. ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದೇವಾ, ನಾ ದಿಕ್ಕಿಲ್ಲದವನು, ಕುಗ್ಗಿದವನು, ನನ್ನ ಬಳಿಗೆ ಬಾ I ನೀನೆನಗೆ ಸಹಾಯಕನು, ರಕ್ಷಕನು ಪ್ರಭು, ತಡಮಾಡದೆ ಬಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾನಾದರೋ ಕುಗ್ಗಿದವನೂ ದಿಕ್ಕಿಲ್ಲದವನೂ ಆಗಿದ್ದೇನೆ; ದೇವರೇ, ಶೀಘ್ರವಾಗಿ ಬಾ. ಯೆಹೋವನೇ, ನೀನೇ ನನಗೆ ಸಹಾಯಕನೂ ರಕ್ಷಕನೂ ಆಗಿದ್ದೀ; ತಡಮಾಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ನಾನು ಬಡವನೂ ಅಗತ್ಯದಲ್ಲಿರುವವನೂ ಆಗಿದ್ದೇನೆ. ದೇವರೇ, ಬೇಗನೆ ನನ್ನ ಬಳಿಗೆ ಬನ್ನಿರಿ. ನನ್ನ ಸಹಾಯವೂ ನನ್ನನ್ನು ಬಿಡಿಸುವವರೂ ನೀವೇ, ಯೆಹೋವ ದೇವರೇ, ತಡಮಾಡದೆ ಬನ್ನಿರಿ. ಅಧ್ಯಾಯವನ್ನು ನೋಡಿ |